Advertisement
ಉದ್ದೇಶಿತ ಈ ಬಡಾವಣೆಯಲ್ಲಿನ ನಾಲ್ಕು ಕಟ್ಟಡಗಳು ಮತ್ತು ಮೂರು ಎಸಿ ಶೀಟ್‌ನ ಶೆಡ್‌ಗಳನ್ನು ಜೆಸಿಬಿ ಮೂಲಕ ಬಿಡಿಎ ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಮೂಲಕ ತೆರವುಕಾರ್ಯಾಚರಣೆಗೆ ಚಾಲನೆ ದೊರಕಿದಂತಾಗಿದೆ. ಸುಪ್ರೀಂ ಕೋರ್ಟ್ ರಚಿಸಿರುವ ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಗೆ ಅರ್ಜಿ ಸಲ್ಲಿಸಿರುವ ಕಟ್ಟಡಗಳನ್ನು ಹೊರತುಪಡಿಸಿ, 2018ರ ಆಗಸ್ಟ್ 3ರನಂತರ ನಿರ್ಮಾಣಗೊಂಡ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಬಿಡಿಎ ಕೈಹಾಕಿದೆ.
Related Articles
Advertisement
ಬಿಡಿಎಯಿಂದ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಹಾಕಿಸಿದ್ದವು. ಇದಾದ ನಂತರ ಎಲ್ಲ ಪ್ರಕ್ರಿಯೆಗಳು ಮುಗಿದ ಮೇಲೆ ನಾನು ಅಧ್ಯಕ್ಷನಾಗಿದ್ದು. ಬಡಾವಣೆ ಮಾಡಬೇಕು ಎಂಬುದು ನಾನು ಅಧ್ಯಕ್ಷನಾದ ನಂತರ ಬಂದ ಆದೇಶವಾಗಿದೆ. ಯಾವುದೇ ಕಾರಣಕ್ಕೂನಾನು ರೈತ ವಿರೋಧಿ ಕೆಲಸ ಮಾಡುವುದಿಲ್ಲ. ಆದರೆ, ಆದೇಶ ಪಾಲನೆ ನಮ್ಮ ಕರ್ತವ್ಯ. ರೈತರೂ 1,500ಎಕರೆ ಜಾಗವನ್ನು ನೀಡಲು ಒಪ್ಪಿಗೆ ನೀಡಿದ್ದಾರೆ’ ಎಂದು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
“ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಇತ್ತೀಚೆಗೆ ಕೂಡ ಶಿವರಾಮ ಕಾರಂತ ಬಡಾವಣೆಯಲ್ಲಿ ಕಟ್ಟಡಗಳನ್ನು ನಿರ್ಮಿಸಿದ್ದು ಕಂಡುಬಂದಿದೆ. ನ್ಯಾಯಾಲಯದ ಆದೇಶದ ಅನ್ವಯ ಬಿಡಿಎ ಅಧಿಕಾರಿಗಳು ಕಟ್ಟಡಗಳನ್ನು ತೆರವುಗೊಳಿಸುತ್ತಿದ್ದಾರೆ. ಇದರಲ್ಲಿ ಬಿಡಿಎ ಅಧಿಕಾರಿಗಳು ಲೋಪ ಎಸಗಿದ್ದರೆ, ಖಂಡಿತ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ, ಕೋರ್ಟ್ ಆದೇಶದ ಪಾಲನೆಗೆ ಶಾಸಕರು ಸಹಕರಿಸಬೇಕು’ ಎಂದರು.
“ಸುಪ್ರೀಂ ಕೋರ್ಟ್ ಪ್ರತಿ 15 ದಿನಗಳಿಗೊಮ್ಮೆ ಪರಿಶೀಲನೆ ಮಾಡಿ, ಸೂಚನೆ ನೀಡುತ್ತಿದೆ. ಶೀಘ್ರ ಮಾದರಿ ಬಡಾವಣೆಯಾಗಿ ನಿರ್ಮಿಸಲಾಗುವುದು. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಿವೇಶನ ಮಾಡಿ ಮಾರಾಟ ಮಾಡಿದವರ ಕೈವಾಡ ಇದರಲ್ಲಿ ಹೆಚ್ಚಿದೆ. ಇದು ಸರಿ ಅಲ್ಲ. ಕೋರ್ಟ್ ರೈತರ ಪರ ತೀರ್ಪು ನೀಡಿದೆ. ಬೇಕಾಬಿಟ್ಟಿ ಆಪಾದನೆ ಮಾಡುವುದು ಸಲ್ಲದು. ಕಾನೂನು ವಿರುದ್ಧವಾದ ಯಾವುದೇ ಪ್ರಕ್ರಿಯೆಯನ್ನು ಶಿವರಾಮ ಕಾರಂತ ಬಡಾವಣೆಯಲ್ಲಿ ಮಾಡುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.