Advertisement

BJP ‘ವಾಷಿಂಗ್ ಮೆಷಿನ್’ ಕಾರ್ಯಾಚರಣೆ ಪುನರಾರಂಭಗೊಂಡಿದೆ: ಕಾಂಗ್ರೆಸ್

07:27 PM Jul 02, 2023 | Team Udayavani |

ಹೊಸದಿಲ್ಲಿ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ನಾಯಕರು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿರುವುದಕ್ಕೆ ಬಿಜೆಪಿಯ “ವಾಷಿಂಗ್ ಮೆಷಿನ್” ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.

Advertisement

ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಸ್ಪಷ್ಟವಾಗಿ ಬಿಜೆಪಿಯ ವಾಷಿಂಗ್ ಮೆಷಿನ್ ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹಲವಾರು ಹೊಸ ಸೇರ್ಪಡೆಯಾದವರು ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಧಿಕಾರಿಗಳೊಂದಿಗೆ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈಗ ಅವರೆಲ್ಲರಿಗೂ ಕ್ಲೀನ್ ಚಿಟ್ ಸಿಕ್ಕಿದೆ” ಎಂದು ಕಿಡಿ ಕಾರಿದ್ದಾರೆ.

ಕಪಿಲ್ ಸಿಬಲ್ ಆಕ್ರೋಶ

ಅಜಿತ್ ಪವಾರ್ ಅವರು ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾನುವಾರ ವಾಗ್ದಾಳಿ ನಡೆಸಿದ್ದು, ಬಹುಶಃ ಇದನ್ನೇ “ಪ್ರಜಾಪ್ರಭುತ್ವದ ತಾಯಿ” ಎಂದು ಮೋದಿ ಅವರು ಅಮೆರಿಕ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next