Advertisement

ದೆಹಲಿ: ಮಸೀದಿಯೊಳಗೆ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

01:43 PM Jun 02, 2021 | Team Udayavani |

ನವದೆಹಲಿ: ಈಶಾನ್ಯ ದೆಹಲಿಯ ಮಸೀದಿಯೊಳಗೆ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮೌಲ್ವಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ. ರಾಜಸ್ಥಾನದ ಭಾರತ್ ಪುರ್ ಮೂಲದ ಮೌಲ್ವಿಯನ್ನು ಸೋಮವಾರ ಗಾಜಿಯಾಬಾದ್ ನ ಲೋನಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

Advertisement

ಇದನ್ನೂ ಓದಿ:ನಟ ವಿಶಾಲ್ ವಿರುದ್ಧ ‘ಮನಸೆಲ್ಲಾ ನೀನೆ’ ನಟಿ ಗಾಯತ್ರಿ ಲೈಂಗಿಕ ಕಿರುಕುಳದ ಆರೋಪ

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳ ಮಕ್ಕಳ ರಕ್ಷಣಾ ಕಾಯ್ದೆಯಡಿ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೌಲ್ವಿಯನ್ನು ನಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ಪಿಟಿಐ ಸುದ್ಧಿ ಸಂಸ್ಥೆ ತಿಳಿಸಿದೆ.

ಆರೋಪಿ ಗಾಜಿಯಾಬಾದ್ ನ ಲೋನಿಯಲ್ಲಿ ವಾಸಿಸುತ್ತಿದ್ದು, ಈತನಿಗೆ ವಿವಾಹವಾಗಿದ್ದು, ನಾಲ್ಕು ಜನ ಮಕ್ಕಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಭಾನುವಾರ ಸಂಜೆ ಮಸೀದಿಯಿಂದ ನೀರು ತರಲು ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೌಲ್ವಿಯನ್ನು ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದಿದ್ದು, ನಂತರ ಕೌನ್ಸೆಲಿಂಗ್ ಕೊಡಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next