ಸಂಗೀತ ನಿರ್ದೇಶಕ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಪ್ರೀತಿಯಿಂದ ತಮ್ಮದೇ ಶರಣ್ಯ ಫೀಲಂಸ್‌ನಡಿ “ಕ್ಲಿಕ್’ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರು ಮಗ ಪವನ್ ಬಸ್ರೂರು ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ.
ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೂಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದು, ಉಳಿದಂತೆ ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.
ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.
ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.