Advertisement
ಅವಿಭಜಿತ ದ.ಕ.ಜಿಲ್ಲೆಯಾದ್ಯಂತ ಬೆಳಗ್ಗೆ ಮೋಡ, ಪೂರ್ವಾಹ್ನ 11 ಗಂಟೆಯ ಬಳಿಕ ಬಿಸಿಲಿನ ತಾಪ ಏರುತ್ತದೆ. ಸಂಜೆಯ ವರೆಗೂ ಇದೇ ರೀತಿ ಇದ್ದು, ರಾತ್ರಿ ಸೆಕೆ, ಮುಂಜಾನೆ 4 ಗಂಟೆ ಬಳಿಕ ಚಳಿಯ ವಾತಾವರಣ ಇರುತ್ತದೆ. ಕಳೆದ ತಿಂಗಳು 37ರಿಂದ 39 ಡಿ.ಸೆ.ವರೆಗೂ ಏರಿಕೆಯಾದ ತಾಪಮಾನ ಸದ್ಯ ತುಸು ಇಳಿದಿದೆ. ಇಂಥ ಸಂದರ್ಭ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕಾಗಿದೆ.
ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅದರಂತೆ ಗರಿಷ್ಠ ಉಷ್ಣಾಂಶ ಏರಿಕೆಯಿಂದಾಗಿ ಏನೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ವೈದ್ಯರು/ತಂಡ ಕ್ಷೇತ್ರ ವೀಕ್ಷಣೆಗೆ ತೆರಳುವ ವೇಳೆ ಮತ್ತು ಸಾರ್ವಜನಿಕರು ಆರೋಗ್ಯ ಕೇಂದ್ರಕ್ಕೆ ಆಗಮಿಸುವಾಗ ಈ ಅರಿವು ಮೂಡಿಸಲಾಗುತ್ತದೆ. ಆರೋಗ್ಯ ಇಲಾಖೆಯಿಂದ ಫೀವರ್ ಸರ್ವೇ ನಡೆಯುತ್ತಿದೆ. ಆಶಾ ಕಾರ್ಯಕರ್ತೆಯರು, ಮಲೇರಿಯಾ ನಿಯಂತ್ರಣ ಕಾರ್ಯಕರ್ತರು, ಆರೋಗ್ಯ ಸುರಕ್ಷಾ ಅಧಿಕಾರಿಗಳು ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಎಂಪಿಡಬ್ಲ್ಯೂ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಜ್ವರದ ಲಕ್ಷಣ ಇದ್ದರೆ ಅವರನ್ನು ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸುತ್ತಿದ್ದಾರೆ.
Related Articles
– ಎಳನೀರು, ಪಾನೀಯ ಸೇರಿದಂತೆ ದ್ರವ ರೂಪದ ಆಹಾರಗಳನ್ನು ಹೆಚ್ಚಾಗಿ ಸೇವಿಸಿ
Advertisement
– ಬಾಯಾರಿಕೆ ಆಗದಿದ್ದರೂ ಪದೇಪದೆ ನೀರು ಕುಡಿಯಬೇಕು– ಹೆಚ್ಚಾಗಿ ಕಾಟನ್ ಬಟ್ಟೆ ಧರಿಸುವುದು ಉತ್ತಮ – ಸಾಕು ಪ್ರಾಣಿಗಳನ್ನು ನಿಲ್ಲಿಸಿದ ವಾಹನಗಳಲ್ಲಿ ಬಿಡಬೇಡಿ. – ಹೊರಾಂಗಣ ಚಟುವಟಿಕೆಗಳಿಗೆ ತುಸು ನಿಯಂತ್ರಣ ಇರಲಿ – ಮಧ್ಯಾಹ್ನ ವೇಳೆ ಹೊರಗಡೆ ಸುತ್ತಾಡುವುದು ತಪ್ಪಿಸಿ – ವೈದ್ಯರ ಸಲಹೆ ಇಲ್ಲದೆ ಆ್ಯಂಟಿಬಯೋಟಿಕ್ ತೆಗೆದುಕೊಳ್ಳಬಾರದು. ವಾತಾವರಣ ಬದಲಾ ಗುತ್ತಿರುವುದರಿಂದ ಅಲ್ಲಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಸೆಕೆ ಹೆಚ್ಚುತ್ತಿದ್ದು, ಬೆವರುಸಾಲೆಯಂತಹ ಚರ್ಮ ರೋಗ ಕಾಣಿಸಿಕೊಳ್ಳುತ್ತಿದೆ. ಯಾವುದೇ ರೋಗ ಲಕ್ಷಣ ಕಂಡು ಬಂದರೂ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆದುಕೊಳ್ಳಬೇಕು.
– ಡಾ| ಕಿಶೋರ್ ಕುಮಾರ್/ಡಾ| ನಾಗಭೂಷಣ್ ಉಡುಪ, ಜಿಲ್ಲಾ ಆರೋಗ್ಯಾಧಿಕಾರಿಗಳು ದ.ಕ., ಉಡುಪಿ