Advertisement

ವಾಯುಭಾರ ಕುಸಿತ: ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ !

11:03 PM Nov 22, 2020 | sudhir |

ನವದೆಹಲಿ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಸೈಕ್ಲೋನ್‌ ಸೃಷ್ಟಿಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತದ ಕೆಲವೆಡೆ ಭಾರೀ ಮಳೆಯಾಗುವ ಸಂಭವವಿದೆ.

Advertisement

“ತಮಿಳುನಾಡು, ಪುದುಚೆರಿ, ಕಾರೈಕಲ್‌ನಲ್ಲಿ ನ.24ರಿಂದ 25ರ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮೆ, ತೆಲಂಗಾಣದ ಕೆಲವು ಪ್ರದೇಶಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ನ.25ರ ವರೆಗೆ ಈ ಪ್ರದೇಶದ ಮೀನುಗಾರರಿಗೆ ಅರಬ್ಬೀ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಪ್ರಸ್ತುತ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಸೈಕ್ಲೋನ್‌ ಗರಿಷ್ಠ 80-90 ಕಿ.ಮೀ. ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಧಾರಾಕಾರ ಮಳೆಯೊಂದಿಗೆ ರಭಸ ಗಾಳಿ ಬೀಸಬಹುದಾದ್ದರಿಂದ ಭೂಕುಸಿತ ಉಂಟಾಗಬಹುದು ಎಂದು ಐಎಂಡಿ ಎಚ್ಚರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next