Advertisement

SRK ‘ಜವಾನ್’ ಕ್ಲಿಪ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆ; ಎಫ್‌ಐಆರ್ ದಾಖಲು

05:06 PM Aug 13, 2023 | Team Udayavani |

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮುಂಬರುವ ಚಿತ್ರ “ಜವಾನ್” ನ ಕ್ಲಿಪ್‌ಗಳನ್ನು ಕದ್ದು ಸೋರಿಕೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Advertisement

ಶಾರುಖ್ ಮತ್ತು ಅವರ ಪತ್ನಿ ಗೌರಿ ಖಾನ್ ಅವರ ನಿರ್ಮಾಣ ಸಂಸ್ಥೆ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ನ ದೂರಿನ ಅನ್ವಯ ದೆಹಲಿ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಸಾಂತಾಕ್ರೂಜ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಸೋರಿಕೆಯಾದ ವಿಡಿಯೋಗಳನ್ನು ತೆಗೆದುಹಾಕಲು ಟ್ವಿಟರ್‌ಗೆ ನ್ಯಾಯಾಲಯದ ನಿರ್ದೇಶನಗಳನ್ನು ಪಡೆಯುವಲ್ಲಿ ಕಂಪನಿಯು ಯಶಸ್ವಿಯಾಗಿದೆ ಎಂದು ಅವರು ಹೇಳಿದರು.

ಪೊಲೀಸ್ ದೂರಿನಲ್ಲಿ, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್‌ನ ಮುಖ್ಯ ಹಣಕಾಸು ಅಧಿಕಾರಿ ಪ್ರದೀಪ್ ನಿಮಾನಿ ಅವರು ಕೆಲವು ಎಕ್ಸ್ ಹ್ಯಾಂಡಲ್‌ಗಳ ಮೂಲಕ ಚಲನಚಿತ್ರದ ತುಣುಕುಗಳನ್ನು ಪ್ರಸಾರ ಮಾಡಲಾಗಿದೆ ಎಂದು ಬಳಕೆದಾರರ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 379 (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಭಾರಿ ನಿರೀಕ್ಷೆ ಮೂಡಿಸಿರುವ “ಜವಾನ್” ಸೆಪ್ಟೆಂಬರ್ 7 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next