Advertisement
ಮಳೆಯಿಂದಾಗಿ ನಗರದಲ್ಲಿ ಸಂಭವಿಸುವ ಅನಾಹುತಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಶನಿವಾರ ಸಭೆ ನಡೆಸಿದ್ದು, ಪಾಲಿಕೆಯ ಎಲ್ಲ ವಿಭಾಗಗಳ ಅಧಿಕಾರಿಗಳು ಮಳೆ ಅನಾಹುತಗಳ ತಡೆಗೆ ಕ್ರಮಕೈಗೊಳ್ಳಬೇಕು. ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
Related Articles
Advertisement
ಮರ ತೆರವಿಗೆ 28 ತಂಡ: ಪಾಲಿಕೆಯ ಎಂಟು ವಲಯಗಳಲ್ಲಿ ಧರೆಗುರುಳಿದ ಮರಗಳನ್ನು ತೆರವುಗೊಳಿಸಲು 21 ತಂಡಗಳು ಕಾರ್ಯರ್ನಿಹಿಸುತ್ತಿವೆ. ಆದರೆ, ಮಳೆಗಾಲದಲ್ಲಿ ಹೆಚ್ಚಿನ ಮರಗಳು ಉರುಳುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ ಏಳು ತಂಡಗಳನ್ನು ನಿಯೋಜಿಸಿಕೊಳ್ಳಲು ಕ್ರಮಕೈಗೊಳ್ಳುವಂತೆ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜಕಾಲುವೆ ನಿರ್ವಹಣೆಗೆ ವಾಹನ ಲಭ್ಯ: ಮಳೆಗಾಲದಲ್ಲಿ ರಾಜಕಾಲುವೆಗಳ ಉಕ್ಕಿಹರಿದು ಅನಾಹುತ ಸಂಭವಿಸುವಂತಹ ಕೆಲವೊಂದು ಸ್ಥಳಗಳನ್ನು ಮಳೆನೀರುಗಾಲುವೆ ವಿಭಾಗ ಗುರುತಿಸಿದೆ. ಅದರಂತೆ ಕಾಲುವೆಗಳಲ್ಲಿನ ಹೂಳು ತಗೆಯಲು ಹಾಗೂ ಇತರೆ ನಿರ್ವಹಣಾ ಕಾರ್ಯಕ್ಕಾಗಿ ಪ್ರತಿಯೊಂದು ವಲಯದಲ್ಲಿಂದು ಹಿಟಾಚಿ, ಎರಡು ಟ್ರಕ್‌ಗಳು ಹಾಗೂ 156 ಜನ ಕಾರ್ಮಿಕರನ್ನು ನಿಯೋಜಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಳೆಗಾಲದಲ್ಲಿ ನಾಗರಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಪಾಲಿಕೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಅದರಂತೆ ಉಪ ವಿಭಾಗಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆ ಹಾಗೂ ನಗರದ ಎಲ್ಲ ರಸ್ತೆಗಳಲ್ಲಿ ಗುಂಡಿಗಳನ್ನು ಕೂಡಲೇ ಮುಚ್ಚಲು ಸೂಚಿಸಲಾಗಿದೆ.-ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತ