Advertisement

ರಾಜ್ಯ ರಾಜಕಾರಣಕ್ಕೆ ಬರಲ್ಲ: ಸಿದ್ದೇಶ್ವರ್‌

03:45 AM Mar 12, 2017 | Team Udayavani |

ದಾವಣಗೆರೆ: ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ, ಸಂಸದನಾಗಿಯೇ ಉಳಿಯುತ್ತೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸುವೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್‌ ತಿಳಿಸಿದ್ದಾರೆ.

Advertisement

ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ಜಯದೇವ ವೃತ್ತದಲ್ಲಿ ಪಕ್ಷ ಹಮ್ಮಿಕೊಂಡಿದ್ದ ವಿಜಯೋತ್ಸವದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯ ರಾಜಕೀಯಕ್ಕೆ ಬರುತ್ತೇನೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಇದು ಸುಳ್ಳು. ನಾನು ಸಂಸದನಾಗಿಯೇ ಇರುತ್ತೇನೆ. 2019ರಲ್ಲಿ ನಡೆಯಲಿರುವ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. 2024ರಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next