ಮುಂಬಯಿ: ಜಾಗತಿಕ ಷೇರುಪೇಟೆಯ ಬಿರುಸಿನ ವಹಿವಾಟಿನ ಪರಿಣಾಮ ಮಂಗಳವಾರ(ಸೆ.14) ಮುಂಬಯಿ ಷೇರುಮಾರುಕಟ್ಟೆಯ ಸಂವೇದಿ ಸೂಚ್ಯಂಕ 69 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.
ಇದನ್ನೂ ಓದಿ:ಗುಜರಾತ್ ನಲ್ಲಿ ಭಾರೀ ಮಳೆ; ರಾಜ್ ಕೋಟ್, ಜಾಮ್ ನಗರದಲ್ಲಿ ಪ್ರವಾಹ, IAF ಕಾರ್ಯಾಚರಣೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 69 ಅಂಕಗಳ ಏರಿಕೆಯೊಂದಿಗೆ 58,247.09 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 25 ಅಂಕ ಏರಿಕೆಯೊಂದಿಗೆ 17,380 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟಿಸಿಎಸ್, ಇಂಡಸ್ ಇಂಡ್ ಬ್ಯಾಂಕ್, ಐಟಿ, ಕೋಟಕ್ ಮಹೀಂದ್ರ ಬ್ಯಾಂಕ್, ಎಲ್ ಆ್ಯಂಡ್ ಟಿ ಮತ್ತು ಎಚ್ ಸಿಎಲ್ ಟೆಕ್, ಆಟೋ ಷೇರುಗಳು ಲಾಭಗಳಿಸಿವೆ. ನೆಸ್ಲೆ ಇಂಡಿಯಾ, ಆಲ್ಟ್ರಾಟೆಕ್ ಸಿಮೆಂಟ್, ಎಚ್ ಯುಎಲ್, ಎಚ್ ಡಿಎಫ್ ಸಿ, ಟಾಟಾ ಸ್ಟೀಲ್, ಬಜಾಜ್ ಫಿನ್ ಸರ್ವ್, ಇನ್ಫೋಸಿಸ್ ಷೇರುಗಳು ನಷ್ಟ ಕಂಡಿವೆ.
ಮಂಗಳವಾರ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 185 ಅಂಕಗಳಷ್ಟು ಏರಿಕೆಯೊಂದಿಗೆ 58,363 ಅಂಕಗಳ ವಹಿವಾಟು ನಡೆಸಿತ್ತು. ಎನ್ ಎಸ್ ಇ ನಿಫ್ಟಿ 57 ಅಂಕಗಳಷ್ಟು ಏರಿಕೆಯೊಂದಿಗೆ 17,412 ಅಂಕಗಳ ಮಟ್ಟ ತಲುಪಿತ್ತು.