ನವದೆಹಲಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ನೀರಸ ವಹಿಟಿನ ಪರಿಣಾಮ ಮುಂಬಯಿ ಷೇರುಪೇಟೆಯಲ್ಲಿ ಸೋಮವಾರ (ಸೆಪ್ಟೆಂಬರ್ 13) ಸಂವೇದಿ ಸೂಚ್ಯಂಕ 127 ಅಂಕ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:NEET ಪರೀಕ್ಷೆಗೆ ವಿನಾಯ್ತಿ ಕೊಡಿ ಎಂದು ತಮಿಳುನಾಡು ಸರ್ಕಾರ ವಾದಿಸುತ್ತಿರುವುದೇಕೆ? ಪರ್ಯಾಯ ವಿಧಾನ ಯಾವುದು
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 127 ಅಂಕ ಇಳಿಕೆಯಾಗಿದ್ದು, 58,177.76 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ 14 ಅಂಕಗಳಷ್ಟು ಅಲ್ಪ ಇಳಿಕೆಯೊಂದಿಗೆ 17,355.30 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯ ಪರಿಣಾಮ ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ಎಚ್ ಡಿಎಫ್ ಸಿ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ ಷೇರುಗಳು ಭಾರೀ ನಷ್ಟ ಕಂಡಿದೆ.
ಕೋಟಕ್ ಮಹೀಂದ್ರ ಬ್ಯಾಂಕ್, ಟಾಟಾ ಸ್ಟೀಲ್, ಟಿಸಿಎಸ್, ಬಜಾಜ್ ಫಿನ್ ಸರ್ವ್ ಮತ್ತು ಮಾರುತಿ ಸುಜುಕಿ ಷೇರುಗಳು ಲಾಭ ಗಳಿಸಿವೆ. ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ವಹಿವಾಟು ಆರಂಭಗೊಂಡಾಗಲೇ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಇಳಿಕೆಗೆ ಸಾಕ್ಷಿಯಾಗಿತ್ತು.