Advertisement

Clothing Store ವಂಚನೆ ಪ್ರಕರಣ: ಆರೋಪಿ ಚೈತ್ರಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು

12:55 AM Nov 01, 2023 | Team Udayavani |

ಕೋಟ: ಬಟ್ಟೆಯಂಗಡಿ ಹಾಕಿಕೊಡುವುದಾಗಿ ಲಕ್ಷಾಂತರ ರೂ ವಂಚಿಸಿದ ಪ್ರಕರಣದಲ್ಲಿ ಆರೋಪಿ ಚೈತ್ರಾ ಅವರನ್ನು ಕೋಟ ಪೊಲೀಸರು ಮಂಗಳವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Advertisement

ಕೋಡಿ ನಿವಾಸಿ ಸುದಿನ ಎನ್ನುವವರು ಚೈತ್ರಾ ಮೇಲೆ ಪ್ರಕರಣ ದಾಖಲಿಸಿದ್ದು, ತನಗೆ ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದ್ದು ನಿನಗೆ ಬಟ್ಟೆಯಂಗಡಿ ನಿರ್ಮಿಸಿಕೊಡುತ್ತೇನೆ ಎಂದು 2018-2023ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದಾಳೆ. ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದೆ. ಉಳಿದ ಎರಡು ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.

ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಒಂದು ದಿನ ವಿಚಾರಣೆ ನಡೆಸಿದ ಪೊಲೀಸರು ಚೈತ್ರಾಳನ್ನು ಮರಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.