ಬೆಂಗಳೂರು: ಜೂನ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ವಿಮಾನ ಬಳಸಿ ಮೋಡ ಬಿತ್ತನೆ ಕಾರ್ಯ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎರಡು ವರ್ಷಗಳ ಮೋಡ ಬಿತ್ತನೆಗೆ 88 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಟೆಂಡರ್ ಕರೆಯಲಾಗುವುದು ಎಂದರು.
ಹುಬ್ಬಳ್ಳಿ ಮತ್ತು ಬೆಂಗಳೂರು ಎರಡು ಕೇಂದ್ರಗಳನ್ನಾಗಿ ಮಾಡಿ ರಾಜ್ಯಾದ್ಯಂತ ಮೋಡ ಬಿತ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬರ ಪರಿಹಾರ ಕೈಗೊಳ್ಳದೇ ಸರ್ಕಾರ ಕಣ್ಮುಚ್ಚಿ ಮಲಗಿಲ್ಲ:ದೇಶಪಾಂಡೆ
ರಾಜ್ಯದಲ್ಲಿ ಬರ ಪರಿಹಾರ ಕೈಗೊಳ್ಳದೇ ಸರ್ಕಾರ ಕಣ್ಮುಚ್ಚಿ ಮಲಗಿಲ್ಲ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಹಾಗೂ ಸಿಇಒಗಳ ಸಭೆ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬರ ಪರಿಹಾರ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.