Advertisement

Cloudburst: ಹಿಮಾಚಲದಲ್ಲಿ ಮೇಘ ಸ್ಫೋಟ, ಕೊಚ್ಚಿ ಹೋದ ಮನೆ, 7 ಮಂದಿ ಮೃತ್ಯು, ಓರ್ವ ನಾಪತ್ತೆ

09:33 AM Aug 14, 2023 | Team Udayavani |

ಹಿಮಾಚಲ ಪ್ರದೇಶ: ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟು, ಓರ್ವ ನಾಪತ್ತೆಯಾದ ಘಟನೆ ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಸಂಭವಿಸಿದೆ.

Advertisement

ಸೋಲನ್‌ನ ಕಂದಘಾಟ್ ಉಪವಿಭಾಗದ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಐವರನ್ನು ರಕ್ಷಿಸಲಾಗಿದೆ ಮತ್ತು ಒಬ್ಬರು ಕಾಣೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿಹೋಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮೇಘ ಸ್ಪೋಟದಲ್ಲಿ ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ಸುಕ್ವಿಂದರ್ ಸುಖ್ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Heavy Rain: ಭಾರಿ ಮಳೆಗೆ ತತ್ತರಿಸಿದ ಚೆನ್ನೈ, ಹಿಮಾಚಲ ಪ್ರದೇಶ, ಜನ ಜೀವನ ಅಸ್ತವ್ಯಸ್ತ

Advertisement
Advertisement

Udayavani is now on Telegram. Click here to join our channel and stay updated with the latest news.

Next