ನವದೆಹಲಿ : ನಮ್ಮ ಪ್ರಕೃತಿಯಲ್ಲಿ ಏನೇನಿದೆ ಎಂದು ಯಾರಿಂದಲೂ ಅಳೆಯಲು ಸಾಧ್ಯವಿಲ್ಲ. ದಿನಕ್ಕೊಂದು ಹೊಸ ಹೊಸ ಜೀವ ಪ್ರಭೇದಗಳು ಈ ಭೂಮಿಯ ಮೇಲೆ ಕಾಣಿಸಿಕೊಳ್ಳುತ್ತಿವೆ. ಅದ್ರಲ್ಲೂ ಇತ್ತೀಚೆಗೆ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಜೀವಿಗಳ ಬಗ್ಗೆ, ಪ್ರಾಣಿಗಳ ಬಗ್ಗೆ ಫೋಟೋಗಳು ವೈರಲ್ ಆಗುತ್ತಲೇ ಇವೆ. ಇದೀಗ ಅಂತಹದ್ದೇ ಒಂದು ಅಪರೂಪದ ಪ್ರಾಣಿ ಪ್ರಭೇದದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಟ್ವಿಟ್ಟರ್ ಖಾತೆಯಲ್ಲಿ ಸದಾ ಆಕ್ಟೀವ್ ಆಗಿದ್ದು, ಹೊಸ ಹೊಸ ವಿಚಾರಗಳನ್ನು ಹಾಗೂ ಪ್ರಾಣಿ ಪಕ್ಷಿಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿರುವ ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಪರ್ವೀನ್ ಕಸ್ವಾನ್, ಹೊಸ ಪ್ರಾಣಿಯೊಂದರ ಫೋಟೋವನ್ನು ಹಂಚಿಕೊಂಡಿದ್ದಾರೆ.
ಈ ಪ್ರಾಣಿ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಕ್ಲೌಡೆಡ್ ಚಿರತೆ. ಮೆಘಾಲಯ ರಾಜ್ಯ ಪ್ರಾಣಿ. ಈ ಪ್ರಾಣಿ ಈಶಾನ್ಯ ಮತ್ತು ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಮೀಸಲು ಪ್ರದೇಶದಲ್ಲಿ ಕಂಡು ಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಫೋಟೋ ನೋಡಿದ ಅನೇಕರು ಇದು ಅವರೂಪದ ಪ್ರಾಣಿ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಇದನ್ನು ನಾವು ಮೊದಲ ಬಾರಿ ನೋಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.