Advertisement

ವಾರದಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ: ಪ್ರಿಯಾಂಕ್‌

06:20 AM Aug 16, 2018 | Team Udayavani |

ಕಲಬುರಗಿ: ದಕ್ಷಿಣ ಕರ್ನಾಟಕದಲ್ಲಿ ಸತತ ಮಳೆಯಾಗುತ್ತಿದ್ದರೂ, ಉತ್ತರ ಕರ್ನಾಟಕ, ಅದರಲ್ಲೂ ಹೈದ್ರಾಬಾದ್‌ ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ. ಹೀಗಾಗಿ, ಶೇ.50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಗಳೆಲ್ಲ ಒಣಗುತ್ತಿವೆ. ಜತೆಗೆ ಹಳ್ಳ-ಕೊಳ್ಳಗಳು ಸಂಪೂರ್ಣ ಬತ್ತಿರುವುದರಿಂದ ಇನ್ನೊಂದು ವಾರ ಕಾಯ್ದು ಮಳೆಯಾಗದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆ ಹಾಗೂ ಬೆಳೆಗಳ ಸ್ಥಿತಿಗತಿ ಕುರಿತಾದ ವರದಿಯನ್ನು ಜಿಲ್ಲಾಧಿಕಾರಿಗಳ ಮೂಲಕ ತರಿಸಿಕೊಂಡಿದ್ದು, ಮೋಡ ಬಿತ್ತನೆ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಚಿವ ಕೃಷ್ಣ ಭೈರೇಗೌಡ ಹಾಗೂ ಸಿಎಂ, ಡಿಸಿಎಂ ಅವರೊಂದಿಗೆ ಚರ್ಚಿಸಿ ಮೋಡ ಬಿತ್ತನೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next