Advertisement

ಡಿಕೆ ಶಿವಕುಮಾರ್ ಪದಗ್ರಹಣ ಸಿಎಂ ಅಸ್ತು: ಆದರೆ ಜೂ.14ರಂದು ನಡೆಯಲ್ಲ ಕಾರ್ಯಕ್ರಮ

01:39 PM Jun 11, 2020 | keerthan |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ ಕೆ ಶಿವಕುಮಾರ್, ಪದಗ್ರಹಣದ ದಿನಾಂಕವನ್ನು ಪಕ್ಷದ ಹಿರಿಯಲ್ಲಿ ಚರ್ಚಿಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪದಗ್ರಹಣ ಕಾರ್ಯಕ್ರಮದ ಕುರಿತಂತೆ ಮುಖ್ಯಮಂತ್ರಿಗಳು ಮಾತನಾಡಿರೋದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತ ಮಾಡಿದ್ದೇನೆ ಎಂದರು.

ನಿನ್ನೆ ಮುಖ್ಯಮಂತ್ರಿ ಬಿಎಸ್ ವೈ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ದೇಶದಲ್ಲಿ ವಿರೋಧ ಪಕ್ಷಗಳು ಕೂಡ ಇರಬೇಕು ಎಂದು ಅವರು ಹೇಳಿದ್ದಾರೆ ಎಂದರು.

ಪದಗ್ರಹಣ ಕಾರ್ಯಕ್ರಮವನ್ನು ಜೂನ್ 14ರಂದು ಮಾಡುವುದಿಲ್ಲ. ನಮ್ಮ ವಿರೋಧ ಪಕ್ಷದ ನಾಯಕರು, ಪಕ್ಷದ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ. ಚರ್ಚೆ ಮಾಡಿದ ಬಳಿಕ ಬೇರೆ ದಿನಾಂಕ ಘೋಷಣೆ ಮಾಡುತ್ತೇನೆ ಎಂದರು.

ಇದನ್ನೂ ಓದಿ:  ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ರಾಜ್ಯ ಸರಕಾರ

Advertisement

ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜನೆಗೊಂಡ ಬಳಿಕ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೋವಿಡ್-19 ಲಾಕ್ ಡೌನ್ ಅಡ್ಡಿಯಾಗಿತ್ತು. ನಂತರದ ದಿನಗಳಲ್ಲಿ ಅನುಮತಿ ಕೋರಿ ಮೂರು ಬಾರಿ ಡಿಕೆಶಿ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ಸರ್ಕಾರ ನಿರಾಕರಿಸಿತ್ತು.

ಇದನ್ನೂ ಓದಿ: ಆಷಾಡಲ್ಲಾದರೂ ಸರಿ ಪದಗ್ರಹಣ ಕಾರ್ಯಕ್ರಮ ಮಾಡಿಯೇ ಮಾಡುತ್ತೇನೆ: ಡಿಕೆ ಶಿವಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next