Advertisement
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಸಭೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಮನವಿಗೆ ಮುಖ್ಯಮಂತ್ರಿ ಸಮ್ಮತಿ ಸೂಚಿಸಿದರು. ಇದರೊಂದಿಗೆ ಕಳೆದ ಒಂದು ದಶಕದಿಂದ ನನೆಗುದಿಗೆ ಬಿದ್ದಿದ್ದ ವಸತಿ ಯೋಜನೆ ಒಂದು ವರ್ಷದಲ್ಲಿ ಪೂರ್ಣಗೊಳ್ಳುವುದರ ಜತೆಗೆ ಫಲಾನುಭವಿಗಳಿಗೆ ಹಂಚಿಕೆಗೆ ನೆರವಾಗಲಿದೆ.ಸಭೆ ಅನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವ ಜಮೀರ್ ಅಹಮ್ಮದ್, 2013ರಿಂದ 2018ರವರೆಗೆ ಮಂಜೂರು ಮಾಡಲಾಗಿರುವ ಮನೆಗಳ ಕಾಮಗಾರಿ ವಿವಿಧ ಹಂತಗಳಲ್ಲಿದ್ದು, ಇದುವರೆಗೆ ಒಂದು ಮನೆ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಈ ಕುರಿತು ಗಮನಹರಿಸಿಲ್ಲ. ಜತೆಗೆ ಒಂದೇ ಒಂದು ಹೊಸ ಮನೆ ಸಹ ಕೊಟ್ಟಿಲ್ಲ. ಈಗ ಫಲಾನುಭವಿಗಳ ವಂತಿಗೆ ಪಾವತಿ ದೊಡ್ಡ ಸಮಸ್ಯೆ ಆಗಿದೆ. ವಸತಿ ಯೋಜನೆ ಪೂರ್ಣಗೊಳಿಸಲು ಎಂಟು ಸಾವಿರ ಕೋಟಿ ರೂ. ಅಗತ್ಯ ಇದೆ. ಈ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಆದಷ್ಟು ಶೀಘ್ರ ಮಾರ್ಗೋಪಾಯ ಹುಡುಕುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿ¨ªಾರೆ. ಕಳೆದ ಹತ್ತು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವಸತಿ ಯೋಜನೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗಳ ಒಂದು ಲಕ್ಷ ಮನೆ ಯೋಜನೆ ಪೂರ್ಣಗೊಳಿಸಲು 500 ಕೋಟಿ ರೂ. ಸಾಲದ ವ್ಯವಸ್ಥೆಗೆ ಸಿಎಂ ಒಪ್ಪಿಗೆ ಸೂಚಿಸಿ¨ªಾರೆ ಎಂದು ಇದೇ ವೇಳೆ ಜಮೀರ್ ಅಹಮ್ಮದ್ ಮಾಹಿತಿ ನೀಡಿದರು.