Advertisement

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

11:46 AM Dec 26, 2024 | Team Udayavani |

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಡಿ.26) ಅಂತಿಮ ಗೌರವ ಸಲ್ಲಿಸಿದರು.

Advertisement

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ, ಮಹೇಶ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರ್ಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

Advertisement

ನಾಲ್ಕು ಮಂದಿ ನಮ್ಮ ಯೋಧರು ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ದಯಾನಂದ ತಿರುಕಣ್ಣನವರ್ ಬೆಳಗಾವಿ, ಧರ್ಮರಾಜ ಸುಭಾಷ ಚಿಕ್ಕೋಡಿ, ಮಹೇಶ್ ನಾಗಪ್ಪ ಬಾಗಲಕೋಟೆ ಹಾಗೂ ಅನೂಪ್ ಪೂಜಾರಿ ಕುಂದಾಪುರ ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಸರ್ಕಾರದಿಂದ ಕುಟುಂಬ ವರ್ಗಕ್ಕೆ ಪರಿಹಾರ ನೀಡಲಾಗುವುದು ಎಂದು‌ ಹೇಳಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಎಚ್.ಸಿ.ಮಹದೇವಪ್ಪ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಎಸ್ ಪಿ ಡಾ. ಭೀಮಾಶಂಕರ ಗುಳೇದ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next