Advertisement

ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ

07:47 PM Feb 07, 2022 | Team Udayavani |

ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್ ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

Advertisement

ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಇಂದು ಹಣಕಾಸು ಸಚಿವರನ್ನು ಭೇಟಿಯಾಗಿ, 2022ರ ಮಾರ್ಚ್ ಗೆ ಜಿ.ಎಸ್.ಟಿ. ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಕೋವಿಡ್ 19 ರಿಂದಾಗಿ ರಾಜ್ಯ ಸರ್ಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದರು.

ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿ.ಎಸ್.ಟಿ. ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿ.ಎಸ್.ಟಿ. ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next