Advertisement

ಕೋವಿಡ್ ವಾರಿಯರ್ಸ್ ಸೇವೆಗೆ ಸಿಎಂ ಮೆಚ್ಚುಗೆ

08:49 AM Jul 28, 2020 | Suhan S |

ತುಮಕೂರು: ಕೋವಿಡ್ ರೋಗಾಣು ವಿರುದ್ಧ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು.

Advertisement

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ವಿಧಾನ ಸೌಧದ ಬ್ಯಾಂಕ್ವೆಂಟ್‌ ಹಾಲ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ಸರ್ಕಾರದ ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವನ್ನು ವೀಕ್ಷಿಸಲು ಜಿಪಂನಲ್ಲಿ ಏರ್ಪಡಿಸಿದ್ದ ವೀಕ್ಷಣಾ ಕಾರ್ಯ ಕ್ರಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ತುಮಕೂರು ಜಿಲ್ಲಾಸ್ಪತ್ರೆಯ ಸ್ಟಾಫ್ ನರ್ಸ್‌ ಹಾಗೂ ಕೋವಿಡ್ ವಾರಿಯರ್ಸ್ ಆಗಿ ಸೇವೆ ನೀಡಿದ ಕಲಾವತಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಕೋವಿಡ್‌ ಪಾಸಿಟಿವ್‌ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ ಸಂದರ್ಭದಲ್ಲಿ ತಮಗೂ ಸೋಂಕು ತಗಲಿತ್ತು. ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ಆಸ್ಪತ್ರೆ ವೈದ್ಯಕೀಯ ಅಧಿಕಾರಿ ಹಾಗೂ ಸಿಬ್ಬಂದಿ ನನಗೆ ಆತ್ಮಸ್ಥೈರ್ಯ ತುಂಬಿದರು ಎಂದರು.

ಜೊತೆಗೆ ವೈದ್ಯರು ಮತ್ತು ಇತರೆ ಅಧಿಕಾರಿಗಳು ನೀಡಿದ ಧೈರ್ಯದ ಮಾತುಗಳು ಹಾಗೂ ಸೂಕ್ತ ಚಿಕಿತ್ಸೆಯಿಂದ ಪೂರ್ಣ ಗುಣಮುಖಳಾಗಿ ಮತ್ತೆ ಸೇವೆಯಲ್ಲಿ ನಿರತಳಾಗಲು ಅನುಕೂಲವಾಗಿದೆ ಎಂದು ತಮ್ಮ ಮನದಾಳದದ ಮಾತುಗಳನ್ನು ಹಂಚಿಕೊಂಡರು. ಸ್ಟಾಫ್ ನರ್ಸ್‌ ಕಲಾವತಿ ಅವರಿಗೆ ಸ್ಪಂದಿಸಿದ ಮುಖ್ಯ ಮಂತ್ರಿಗಳು ಕಲಾವತಿ ಅವರ ಸೇವೆಯನ್ನು ಅಭಿನಂದಿಸಿದರಲ್ಲದೆ ನಿಮ್ಮಂಥ ಕೊರೊನಾ ಸೇನಾನಿಗಳಿಂದ ಸೋಂಕಿತರು ತಮ್ಮ ಧೈರ್ಯವನ್ನು ಹೆಚ್ಚಿಸಿಕೊಂಡು ಬೇಗ ರೋಗ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರದ ಸಾಧನೆಯ ಸವಾಲುಗಳ 1 ವರ್ಷ- ಪರಿಹಾರದ ಸ್ಪರ್ಶ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಪಾದಿಸಿದ ಜನಪದ ಮತ್ತು ಮಾರ್ಚ್‌ ಆಫ್ ಕರ್ನಾಟಕದ ಸಂಚಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಬಿಡುಗಡೆ ಮಾಡಿದರು. ಶಾಸಕರಾದ ಮಸಾಲಾ ಜಯರಾಂ, ಜಿ.ಬಿ.ಜ್ಯೋತಿ ಗಣೇಶ್‌, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಪಂ ಸದಸ್ಯ ವೈ.ಎಚ್‌.ಹುಚ್ಚಯ್ಯ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೋನವಂಸಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next