Advertisement

ಮಥಾಯಿ ವರದಿ ಮಾಹಿತಿ ಕೇಳಿದ ಸಿಎಂ

06:36 AM May 18, 2019 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತುಗಳಿಂದ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು 2015ರಲ್ಲಿ ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿದ್ದ ಕೆ.ಮಥಾಯಿ ಅವರು ನೀಡಿದ್ದ ವರದಿಯ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್‌ ಅವರಿಗೆ ಸೂಚನೆ ನೀಡಿದ್ದಾರೆ.

Advertisement

ಶುಕ್ರವಾರ ತಮ್ಮನ್ನು ಭೇಟಿ ಮಾಡಿದ್ದ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಅವರಿಂದ ಮುಖ್ಯಮಂತ್ರಿಗಳು ವಿವರಣೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಹಿರಿಯ ಐಎಎಸ್‌ ಅಧಿಕಾರಿಗಳ ಕೈವಾಡ ಇರುವ ಬಗ್ಗೆಯೂ ವರದಿಯಲ್ಲಿ ಉಲ್ಲೇಖೀಸಿರುವುದನ್ನು ಮಥಾಯಿ ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದು, ಇದರಿಂದ ತಮಗೆ ಸರಿಯಾದ ಹುದ್ದೆ ದೊರೆಯದೆ ಕಿರುಕುಳ ಅನುಭವಿಸುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಥಾಯಿ ಅವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ತಕ್ಷಣ ತಮ್ಮ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್‌ ಅವರಿಗೆ ಮಥಾಯಿ ವರದಿಯ ಬಗ್ಗೆ ಸಂಪೂರ್ಣ ವಿವರ ಪಡೆದು ಕಡತ ಮಂಡಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಮಥಾಯಿ ಅವರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next