Advertisement
ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳಿಗೆ ಮೀಸಲಾಗಿರುವ ಹುದ್ದೆಗಳು ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ಖಾಲಿ ಇವೆ. ಹೀಗಾಗಿ ಖಾಲಿ ಇರುವ ಬ್ಯಾಕ್‌ಲಾಗ್ ಹು¨ªೆಗಳನ್ನು ಶೀಘ್ರ ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹಿಂದುಳಿದ ವರ್ಗಗಳಿಗೆ ಸರ್ಕಾರದ ಕಾರ್ಯಕ್ರಮಗಳು ಮುಟ್ಟಬೇಕು. ಈ ನಿಟ್ಟಿನಲ್ಲಿ “ವಿದ್ಯಾಸಿರಿ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪ್ರವರ್ಗ-1, 2ಎ ವರ್ಗಕ್ಕೆ ಸೇರಿದ ಸಂಘ-ಸಂಸ್ಥೆಗಳು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಿಗೂ ಯೋಜನೆ ವಿಸ್ತರಿಸಬೇಕು. ಜತೆಗೆ ವಿವಿಧ ಸಂಘ- ಸಂಸ್ಥೆಗಳು ನಡೆಸುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ತಲಾ ಐದು ಲಕ್ಷ ರೂ.ಗಳ ನಿರ್ವಹಣಾ ಅನುದಾನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಆದೇಶಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ ಲೈಬ್ರರಿ ಸೌಲಭ್ಯ:
ಇದೇ ವೇಳೆ ವೈದ್ಯ ಮತ್ತು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶುಲ್ಕವನ್ನು ಸಿಇಟಿಗೆ ವಿಳಂಬವಾಗದಂತೆ ಮರು ಪಾವತಿ ಮಾಡಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಹಣಕಾಸು ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು. ಸ್ವಂತ ಕಟ್ಟಡ ನಿರ್ಮಿಸುವಾಗ ಲೈಬ್ರರಿಗೂ ಸ್ಥಳಾವಕಾಶ ಒದಗಿಸಬೇಕು. ಇದಲ್ಲದೆ ಹಾಲಿ ಇರುವ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಹಾಸ್ಟೆಲ…ಗಳಲ್ಲಿಯೂ ವಿದ್ಯಾರ್ಥಿಗಳಿಗೆ ಲೈಬ್ರರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
Related Articles
Advertisement
ಹಾಸ್ಟೆಲ…ಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಕಡೆಗೂ ನಿಗಾ ಇರಿಸುವಂತೆ ಸೂಚಿಸಿದ ಅವರು, ಹಾಸ್ಟೆಲ್‌ಗಳಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಅಧಿಕಾರಿಗಳು, ಬಾಲಕಿಯರ ಹಾಸ್ಟೆಲ…ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬಯೋಮೆಟ್ರಿಕ್, ಆನ್‌ಲೈನ್ ಅರ್ಜಿ ವ್ಯವಸ್ಥೆ, ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೊಹಮದ್ ಮೊಹಿಸಿನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಅನುºಕುಮಾರ್ ಹಾಜರಿದ್ದರು.
ಹಾಸ್ಟೆಲ್ ವಿದ್ಯಾರ್ಥಿಗಳಿಗೆ15 ದಿನಕ್ಕೊಮ್ಮೆ ಚಿಕನ್
ಸರ್ಕಾರವು ವಿದ್ಯಾರ್ಥಿನಿಲಯಗಳ ಭೋಜನ ವೆಚ್ಚವನ್ನು ಹೆಚ್ಚಿಸಿರುವುದರಿಂದ ಊಟ, ತಿಂಡಿಗೆ ಹೊಸ ಮೆನು ಚಾರ್ಟ್ ಸಿದ್ಧಪಡಿಸಲಾಗಿದೆ. ನೂತನ ಚಾರ್ಟ್ ಪ್ರಕಾರ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸಿಹಿ ಊಟ, ಪ್ರತಿ ತಿಂಗಳ 1 ಮತ್ತು 15ನೇ ತಾರೀಖೀನಂದು ಚಿಕನ್, ವಾರದಲ್ಲಿ ಮೂರು ದಿನ ಬಾಳೆಹಣ್ಣು, ಮೂರು ದಿನ ಮೊಟ್ಟೆ ನೀಡಲಾಗುತ್ತದೆ. ಇದರ ಜೊತೆಗೆ ಕಡ್ಡಾಯವಾಗಿ ಕಾಫಿ, ಟೀ ಮತ್ತು ಕುರಕಲು ತಿಂಡಿ ವ್ಯವಸ್ಥೆಯೂ ಇರಲಿದೆ ಎಂದು ಅಧಿಕಾರಿಗಳು ಹೇಳಿದರು.