ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಇರುವಾಗಲೇ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವ ಕುಮಾರ್ ಅವರಷ್ಟೇ ಅಲ್ಲದೆ ಮುಖ್ಯ ಮಂತ್ರಿ ಸ್ಥಾನಕ್ಕೆ ಇನ್ನೂ ಮೂವರು ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ.
ಡಾ| ಜಿ. ಪರಮೇಶ್ವರ್, ಎಸ್.ಆರ್. ಪಾಟೀಲ್, ಕೆ.ಎನ್. ರಾಜಣ್ಣ ಕೂಡ “ನಾವೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಳೇ’ ಎಂದು ಆಸೆ ವ್ಯಕ್ತ ಪಡಿಸಿ ದ್ದಾರೆ. ಈ ಮೂಲಕ ದೂರದ ಮುಖ್ಯ ಮಂತ್ರಿ ಸ್ಥಾನಕ್ಕೆ ಈಗಲೇ ಹಕ್ಕುಗಾರಿಕೆ ಸ್ಥಾಪಿಸಿ, “ನಾವೂ ರೇಸ್‌ನಲ್ಲಿದ್ದೇವೆ’ ಎಂಬ ಸಂದೇಶ ರವಾನಿಸಿದ್ದಾರೆ.
“ರಾಜಕೀಯದಲ್ಲಿ ಯಾರೂ ಸನ್ಯಾಸಿ ಗಳಲ್ಲ. ಒಂದು ವೇಳೆ ನನಗೆ ಅವಕಾಶ ಸಿಕ್ಕಿದರೆ ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಯಿಂದ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ಗುರುವಾರ ಕೊಪ್ಪಳದಲ್ಲಿ ಮಾತನಾಡಿದ ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
“ಸಮಯ, ಸಂದರ್ಭ ಬಂದಾಗ ನಾನೂ ಸಿಎಂ ಸ್ಥಾನಕ್ಕೆ ಆಕಾಂಕ್ಷಿಯೇ ಎಂಬುದನ್ನು ಹೇಳುವೆ’ ಎಂದು ಮೈಸೂರಿ ನಲ್ಲಿ ಮಾತನಾಡಿದ ಮಾಜಿ ಡಿಸಿಎಂ ಡಾ| ಜಿ. ಪರಮೇಶ್ವರ್ ಮಾರ್ಮಿಕ ವಾಗಿ ತಿಳಿಸಿದ್ದಾರೆ.ಈ ನಡುವೆ, ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ವಿಚಾರವನ್ನು ಯಾರೂ ಮಾತನಾಡಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಶಾಸಕರ ಹೇಳಿಕೆಗಳ ಬಗ್ಗೆ ಶಾಸಕಾಂಗ ಪಕ್ಷದ ನಾಯಕರು ನೋಡಿ ಕೊಳ್ಳು ತ್ತಾರೆ ಎಂದು ಇತ್ತೀಚೆಗೆ ಡಿ.ಕೆ. ಶಿವ ಕುಮಾರ್ ಹೇಳಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೇìವಾಲಾ ಅವರು ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಮಾತನಾಡಿದ್ದರು. ಇದರ ಬೆನ್ನಲ್ಲೇ ಈ ಸೂಚನೆ ಹೊರಬಿದ್ದಿದೆ.
ಚುನಾವಣೆಗೆ ಸ್ಪರ್ಧಿಸುವ 224 ಮಂದಿಯಲ್ಲಿ ಗೆಲ್ಲುವವರ ಜತೆಗೆ ಸೋತವರೂ ಮುಖ್ಯಮಂತ್ರಿಯಾದದ್ದನ್ನು ರಾಜ್ಯದ ರಾಜಕೀಯ ಇತಿಹಾಸದಲ್ಲಿ ನೋಡಿದ್ದೇವೆ. ದೇವರಾಜ ಅರಸು, ರಾಮಕೃಷ್ಣ ಹೆಗಡೆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಆಗಲಿಲ್ಲವೇ?
– ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ