ದಾವೋಸ್ : ಸ್ವಿಜರ್ಲ್ಯಾಂಡ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗಿಯಾಗಿ ಕರ್ನಾಟಕದಲ್ಲಿ ನೆಲ, ಜಲ ಸಂರಕ್ಷಣೆಯ ಕುರಿತು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು.
ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭೂಮಿ ಮತ್ತು ಮಣ್ಣಿನ ರಕ್ಷಣೆ ಕುರಿತಾಗಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ”ನಮಗೆಲ್ಲ ಸದ್ಗುರುಗಳು ಸ್ಫೂರ್ತಿ , ನೆಲ ಮತ್ತು ಜಲ ಸಂರಕ್ಷಣೆಯಲ್ಲಿ ತನ್ನದೇ ಆದ ಮಹತ್ವದ ಕೊಡುಗೆಯನ್ನು ಜಗತ್ತಿಗೆ ನೀಡಿದವರು ಅವರು” ಎಂದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಜತೆಗಿದ್ದರು.