ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಸುಮ್ಮನಿದ್ದು, ಪರೀಕ್ಷೆ ನಂತರ ಕೋವಿಡ್ 19 ಸ್ಪೀಡ್ ಕಟ್‌ಡೌನ್ ಕುರಿತು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಿದ್ದು, ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚಿಸುತ್ತೇನೆ.
ಕಲಬುರಗಿಯಂತಹ ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗುವುದು ಎಂದರು. ಕೋವಿಡ್ ನಿಯಂತ್ರಣ ಸಂಬಂಧ ಸೋಮವಾರದಿಂದ ಸಭೆ ನಡೆಸಲಾಗುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ರೋಗದ ಲಕ್ಷಣವಿಲ್ಲದವರನ್ನು ದಾಖಲಿಸಿಕೊಂಡು ಶುಲ್ಕ ಸಂಗ್ರಹಿಸಲಾಗುತ್ತಿದೆ. ಕೋವಿಡ್ ಸೋಂಕಿತರಿಗೆ ಯಾವುದೇ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೋವಿಡ್ ಚಿಕಿತ್ಸೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವೈದ್ಯರು, ಅರೆವೈದ್ಯ ಸಿಬ್ಬಂದಿಗೂ ವಿಮೆ, ಪರಿಹಾರ ಇತರೆ ಸೌಲಭ್ಯ ನೀಡಲಾಗುವುದು. ಟೆಲಿ ಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಕ್ರಮವಹಿಸಲಾಗುವುದು. ಮುಂಬರುವ ದಿನಗಳಲ್ಲಿ ಕೋವಿಡ್‌ನಿಂದ ನರಳುತ್ತಿರುವವರಿಗೆ ಗುಣಮಟ್ಟದ ಚಿಕಿತ್ಸೆ ದೊರೆತು ಗುಣಮುಖರಾಗಲು ಅನುಕೂಲವಾಗುವ ವಿಶ್ವಾಸವಿದೆ.
-ಬಿ.ಎಸ್.ಯಡಿಯೂರಪ್ಪ, ಸಿಎಂ
ರಾಜಧಾನಿಯಲ್ಲಿ ಕೋವಿಡ್ 19 ಸೋಂಕು ಹೆಚ್ಚಳದಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ. ಕಳೆದ ಒಂದು ವಾರದಿಂದ ಹೆಚ್ಚಳವಾಗುತ್ತಿದೆ. ಜುಲೈನಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಾಗಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಆದರೂ ಆತಂಕ ಬೇಡ.
-ಡಾ.ಕೆ.ಸುಧಾಕರ್, ಸಚಿವ