Advertisement

ಸೋಂಕು ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಬಿಎಸ್ ವೈ ಮನವಿ

09:06 AM Apr 06, 2020 | keerthan |

ಬೆಂಗಳೂರು: ಕೋವಿಡ್ 19 ಪ್ರಕರಣಗಳ ಸಂಖ್ಯೆ ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಜನತೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ವಿಶ್ವದಾದ್ಯಂತ “ಕೋವಿಡ್ – 19” ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಹ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದೆ. ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದ ಜನತೆ ಲಾಕ್ ಡೌನ್ ನ ಹಿಂದಿನ ಆಶಯವನ್ನು ಹಾಗೂ ಲಾಕ್ ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್ ಡೌನ್ ಆದೇಶ ಪಾಲಿಸಬೇಕಾಗಿದೆ.” ಎಂದು ಅವರು ಹೇಳಿದ್ದಾರೆ.

ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ.  ಪ್ರಧಾನ ಮಂತ್ರಿಯವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್‍ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದ್ದು, ಈ ಲಾಕ್‍ಡೌನನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ  ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ವೈ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next