Advertisement
ಫೇಸ್ ಬುಕ್ ಮತ್ತು ಯೂಟ್ಯೂಬ್ ಲೈವ್ ನಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿದರು.
Related Articles
Advertisement
ರಾಜ್ಯದಲ್ಲಿ ಪತ್ತೆಯಾಗಿರುವ ಸೋಂಕಿತರಲ್ಲಿ ಶೇ.80 ರಷ್ಟು ಜನರಿಗೆ ರೋಗಲಕ್ಷಣವಿಲ್ಲ. ಶೇ.5ರಷ್ಟು ಮಂದಿಗೆ ಮಾತ್ರ ಐಸಿಯು, ವೆಂಟಿಲೇಟರ್ ಅಗತ್ಯವಿದೆ. ರೋಗಲಕ್ಷಣವಿಲ್ಲದ ಸೋಂಕಿತರಿಗೆ ಹೋಮ್ ಐಸಲೋಶನ್ ಮತ್ತು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದರು.
ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸೋಂಕಿತರು ಆತ್ಮಹತ್ಯೆೆ ಮಾಡಿಕೊಳ್ಳುವುದು ಸರಿಯಲ್ಲ. ರಾಜ್ಯದಲ್ಲಿ 100ಕ್ಕೆೆ 98 ಮಂದಿ ಗುಣಮುಖರಾಗುತ್ತಿದ್ದಾರೆ. ಹೀಗಾಗಿ ಯಾರು ಕೂಡ ಆತಂಕ ಅಥವಾ ಭಯ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆಯಿಂದ ಇರಬೇಕು. ಜನ ಜೀವನ ಸಾಮಾನ್ಯ ಸ್ಥಿಿತಿಗೆ ಬರಬೇಕು ಹಾಗೂ ಸೋಂಕಿತರೊಂದಿಗೆ ಸೌಜನ್ಯದಿಂದಲೇ ವರ್ತಿಸಬೇಕು. ಕೋವಿಡ್ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಕ್ರಮ ಮುಂದುವರಿಸಲಿದೆ ಎಂದು ಹೇಳಿದರು.
ಈ ಹಿಂದೆ ಪರೀಕ್ಷಾ ವರದಿ ಬರಲು ತಡವಾಗುತ್ತಿದ್ದು, ಇನ್ನು ಮುಂದೆ 24 ಗಂಟೆಯೊಳಗೆ ಪರೀಕ್ಷಾ ವರದಿ ಬರುವಂತೆ ನೋಡಿಕೊಳ್ಳಲಾಗಿದೆ ಎಂದರು.
ಆ್ಯಂಬುಲೆನ್ಸ್ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಬೇಡ. ಅಗತ್ಯವಿರುವಷ್ಟು ಆ್ಯಂಬೆಲೆನ್ಸ್ ಸೌಲಭ್ಯ ನಮ್ಮ ಬಳಿಯಿದೆ. ಯಾರಿಗೂ ಆತಂಕ, ಗೊಂದಲ ಬೇಡ ಎಂದರು.