Advertisement

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

05:27 PM Jan 19, 2021 | Team Udayavani |

ಕಾಪು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

Advertisement

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ‌ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸು ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಸಿ.‌ ಅಮೀನ್ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ಮೂಲಕವಾಗಿ ಮುಖ್ಯಮಂತ್ರಿಗಳನ್ನು ಗೌರವಿಸಲಾಯಿತು.

ಇದನ್ನೂ ಓದಿ:ವಲಸಿಗರ ಬಣದಲ್ಲಿ ಒಡಕಿನ ಸುಳಿವು: ಭಿನ್ನ ದಿಕ್ಕಿನೆಡೆಗೆ ಮುಖಂಡರ ಚಿಂತನೆ

ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರಗೊಳ್ಳಲಿದ್ದು, ಇದಕ್ಕಾಗಿ ಈಗಾಗಲೇ 5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಹೆಚ್ಚುವರಿ 10 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಲಾಯಿತು.

Advertisement

ಇದನ್ನೂ ಓದಿ:ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್: 13 ಜನರ ದುರ್ಮರಣ

ಸಂಸದೆ ಶೋಭಾ‌ ಕರಂದ್ಲಾಜೆ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯೆ ಶಿಲ್ಪಾ‌ ಜಿ. ಸುವರ್ಣ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕುತ್ಯಾರು ನವೀನ್‌ ಶೆಟ್ಟಿ ಹಾಗೂ ಮೊಗವೀರ ಸಮಾಜದ ವಿವಿಧ ಮುಖಂಡರು, ಕ್ಷೇತ್ರಾಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಸಹಿತ ವಿವಿಧ ಉಪ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next