ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಸಂಜೆ 4 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು, ಕರ್ಫ್ಯೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ:ಚಾಮರಾಜನಗರ ದುರಂತ: ಮಧ್ಯರಾತ್ರಿ ಮನೆಗೆ ಹೋಗಿ ಕರೆದರೂ ಆಸ್ಪತ್ರೆಗೆ ಬರಲಿಲ್ಲ ಡಿಸಿ!
ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವ ಸುಧಾಕರ್ ಅವರಿಂದ ಮಾಹಿತಿ ಪಡೆದಿದ್ದಾರೆ. ಕೂಡಲೇ ಚಾಮರಾಜನಗರಕ್ಕೆ ತೆರಳಿ ನೇರ ಮಾಹಿತಿ ಪಡೆಯುವಂತೆ ಸಚಿವ ಸುಧಾಕರ್ ಗೆ ಸಿಎಂ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ರವಿವಾರ ರಾತ್ರಿ ಆಕ್ಸಿಜನ್ ಕೊರತೆಯಾಗಿ ರೋಗಿಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕೋವಿಡ್ 2ನೇ ಅಲೆ ತಡೆಗಟ್ಟಲು ಲಾಕ್ ಡೌನ್ ಉತ್ತಮ ಮಾರ್ಗ: ಕೇಂದ್ರಕ್ಕೆ ಸುಪ್ರೀಂ