Advertisement

ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ, ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

05:22 PM Jun 03, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಎರಡನೇ ಕೋವಿಡ್ ಪ್ಯಾಕೇಜ್ ಘೋಷಣೆ ಮಾಡಿದರು. ಈ ಬಾರಿ ಸಿಎಂ 500 ಕೋಟಿ ರೂ ಪ್ಯಾಕೇಜ್ ಘೋಷಣೆ ಮಾಡಿದರು.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 5 ಕ್ಕಿಂತ ಕಡಿಮೆಯಾದರೆ, ಒಂದು ವಾರದಲ್ಲಿ ಎಲ್ಲವನ್ನೂ ತೆರವುಗೊಳಿಸಲು ಸಿದ್ದರಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಜಾಸ್ತಿ ಇದೆ. ಜನರು ಸಹಕಾರ ನೀಡಬೇಕು. ಒಂದು ವಾರದ ನಂತರ ಶೇ 5 ಕ್ಕಿಂತ ಕಡಿಮೆ ಬಂದರೆ ಎಲ್ಲ ರೀತಿಯ ವಿನಾಯಿತಿ ನೀಡಲಾಗುವುದು ಎಂದರು.

ಇದನ್ನೂ ಓದಿ:ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಗಳು ಮುಂದುವರಿಯಲಿದೆ.  ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು.

Advertisement

ಪ್ಯಾಕೇಜ್ ಘೋಷಣೆ

ನೇಕಾರರು, ಚಲನಚಿತ್ರ ಹಾಗೂ ದೂರದರ್ಶನ ನೋಂದಾಯಿತ ಕಾರ್ಮಿಕರಿಗೆ, ಮೀನುಗಾರರು, ಮುಜುರಾಯಿ ಇಲಾಖೆಯ ಅರ್ಚಕರು ಮತ್ತು ಅಡುಗೆ ಸಿಬ್ಬಂದಿ, ಮಸೀದಿ ಬೇಸಿಮಾ ಮೌಜಿನ್‌ಗಳಿಗೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದರು.

ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ  ಶಾಲಾ ಶಿಕ್ಷಕರಿಗೆ ತಲಾ ಐದು ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ ಜೂನ್ ಮತ್ತು ಜುಲೈನಲ್ಲಿ ಹಾಲಿನ ಪುಡಿ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next