Advertisement

ಲಾಕ್ ಡೌನ್ ಪರಿಸ್ಥಿತಿ ನಿಮ್ಮ ಕರ್ಫ್ಯೂ ಪಾಲನೆ ಮೇಲೆ ಅವಲಂಬಿತವಾಗಿದೆ: ಬಿಎಸ್ ವೈ ಮನವಿ

09:46 AM Mar 31, 2020 | keerthan |

ಬೆಂಗಳೂರು: ಕೋವಿಡ್-19 ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರು ಕರೆ ನೀಡಿರುವ ಲಾಕ್‍ಡೌನ್‍ನ ಅವಧಿ ನಾಗರಿಕರು ಅದನ್ನು ಎಷ್ಟು ಕಟ್ಟುನಿಟ್ಟಿನಿಂದ ಪಾಲನೆ ಮಾಡುತ್ತಾರೆ ಎಂಬುದರ ಮೇಲೆ ಅವಲಂಬಿಸಿದೆ. ಆದ್ದರಿಂದ ನಾಡಿನ ಜನತೆ ಲಾಕ್ ಡೌನ್ ಅನ್ನು ಎಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಯವರು ಮನವಿ ಮಾಡಿದ್ದಾರೆ.

Advertisement

ರಾಜ್ಯದಲ್ಲಿ ಕರ್ಫ್ಯೂ  ಜಾರಿಯಲ್ಲಿದೆ.  ಆದರೆ ಕೆಲವು ನಗರ ಪ್ರದೇಶದ ಜನರು ಕಫ್ರ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಎಲ್ಲರೂ ಲಾಕ್ ಡೌನ್ ಪಾಲಿಸಿ. ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು.  ಅವರೇನು ನಿಮ್ಮ ವೈರಿಗಳಲ್ಲ.  ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಲಾಕ್ ಡೌನ್ ಅವಧಿಯ ಬಾಕಿಯಿರುವ 16 ದಿನಗಳಲ್ಲಿ ನಿಮ್ಮ ಮನೆಯಲ್ಲಿಯೇ ಇರಿ.  ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ.  ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ. ಪುಸ್ತಕಗಳನ್ನು ಓದಿರಿ ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ ಎಂದು ಬಿಎಸ್ ವೈ ಸಲಹೆ ನೀಡಿದ್ದಾರೆ.

ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಸರಕಾರ ಎಚ್ಚರವಹಿಸಿದೆ ಎಂದ ಅವರು ಯಾವುದೇ ಸುಳ್ಳು ಸುದ್ದಿಗಳಿಗೆ ಮತ್ತು  ವದಂತಿಗಳಿಗೆ ಕಿವಿಗೊಡಬೇಡಿ.  ನೀವು ಎಷ್ಟು ಕಟ್ಟುನಿಟ್ಟಿನಿಂದ ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ ಏಪ್ರಿಲ್-14 ಕ್ಕೆ ಲಾಕ್‍ಡೌನ್ ಮುಗಿಯುವುದು.  ಲಾಕ್‍ಡೌನ್ ಪರಿಸ್ಥಿತಿ ನಿಮ್ಮ ಕರ್ಫ್ಯೂ  ಪಾಲನೆ ಮೇಲೆ ಅವಲಂಬಿತವಾಗಿದೆ ಎಂದು ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next