ಶಿವಮೊಗ್ಗ: ನೆರೆ- ಕೋವಿಡ್ ನಡುವೆಯೂ ಒಳ್ಳೆಯ ಬಜೆಟ್ ನೀಡಲು ಪ್ರಯತ್ನ ಮಾಡುತ್ತಿದ್ದೇನೆ. ಯಾವುದಕ್ಕೂ ಕೊರತೆಯಾಗದಂತೆ ಮಾರ್ಚ್ 8ರಂದು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಉಪಚುನಾವಣೆಗೆ ದಿನಾಂಕ ನಿಗದಿಯಾಗಲಿದೆ. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಗೆಲ್ಲಲು ವ್ಯವಸ್ಥೆ ಮಾಡಿಕೊಂಡಿದ್ದೇವೆ. ನಾಲ್ಕು ಕ್ಷೇತ್ರಗಳಲ್ಲೂ ನೂರಕ್ಕೆ ನೂರರಷ್ಟು ಬಿಜೆಪಿ ದೊಡ್ಡ ಅಂತರದಲ್ಲಿ ಗೆಲ್ಲಲಿದೆ ಎಂದರು.
ಇದನ್ನೂ ಓದಿ:ಸಿದ್ದಾರಮಯ್ಯ ಜೊತೆ ದಿಲ್ಲಿಗೆ ಹೋಗಿ ಡಿಕೆಶಿ ವಿರುದ್ಧ ದೂರು ನೀಡುತ್ತೇನೆ: ಅಖಂಡ ಶ್ರೀನಿವಾಸ
ಉಪಚುನಾವಣೆಗೆ ಸಂಬಂಧಿಸಿ ನಮ್ಮ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರು ಹಲವರಿಗೆ ಜವಾಬ್ದಾರಿ ವಹಿಸಿದ್ದಾರೆ. ಉಸ್ತುವಾರಿ ವಹಿಸಿಕೊಂಡಿರುವವರು ಈಗಾಗಲೇ ಪ್ರವಾಸ ಮಾಡುತ್ತಿದ್ದಾರೆ ಎಂದರು.
ಕೋವಿಡ್ ಲಸಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ಲಸಿಕೆಯನ್ನು ಎಲ್ಲಾ ನಾಗರಿಕರು ತೆಗೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದುಕೊಳ್ಳಿ, ನಾನು ಸಹ ಲಸಿಕೆ ತೆಗೆದುಕೊಳ್ಳುತ್ತೇನೆ. ಪ್ರಧಾನಿ ಮೋದಿಯವರೇ ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆ. ಪ್ರಧಾನಿಯವರೇ ತೆಗೆದುಕೊಂಡ ಮೇಲೆ ಹಿಂಜರಿಕೆ ಮಾಡದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಸಿಎಂ ಬಿಎಸ್ ವೈ ಟೆಂಪಲ್ ರನ್: ಬೆಂಗಳೂರು ಪ್ರಯಾಣ ರದ್ದು