ಬೆಳಗಾವಿ: ಸಿ.ಡಿ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದರಲ್ಲಿ ಎಸ್ಐಟಿ ಸಂಪೂರ್ಣ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ:ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?
ತಾವು ಮೌನವಾಗಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ಪ್ರತಿದಿನ ಗೃಹ ಸಚಿವರಿಂದ ಇದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಎಲ್ಲವೂ ಕಾನೂನಿನ ಚೌಕಟ್ಟಿನಲ್ಲಿ ಹಾಗೂ ನಿಷ್ಪಕ್ಷಪಾತವಾಗಿ ನಡೆದಿದೆ. ಸಿದ್ದರಾಮಯ್ಯ ಅವರು ಜವಾಬ್ದಾರಿ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ಮಾತನಾಡಬೇಕು ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ: ಬೆಳಗಾವಿ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್
ಈ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ. ಅವರಿಗೆ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಹೇಳಿದ್ದೇನೆ ಎಂದರು.
ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.