ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಬಿಎಸ್ ಯಡಿಯೂರಪ್ಪ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆನಲ್ಲಿ ಜನರಲ್ ಚೆಕಪ್ ಗೆ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಕಾರಣದಿಂದ ಮುಖ್ಯಮಂತ್ರಿಗಳನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿದೆ.
ಇದನ್ನೂ ಓದಿ:ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು
ಸಿಎಂ ಆರೋಗ್ಯದ ಬಗ್ಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಡಾ. ಗುರುದೇವ್ ಮಾಹಿತಿ ನೀಡಿದ್ದು, ಚುನಾವಣೆ ಪ್ರಚಾರಕ್ಕೆ ತೆರಳಿದ್ದರಿಂದ ಸುಸ್ತಾಗಿದ್ದಾರೆ. ರಟ್ಟೆ ನೋವು ಅಂತ ಬಂದಿದ್ದರು. ಈಗ ಸ್ಕ್ಯಾನಿಂಗ್ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಇದೆ. ಸದ್ಯ ಅವರಿಗೆ ಯಾವುದೇ ಜ್ವರ ಇಲ್ಲ ಎಂದಿದ್ದಾರೆ.
ಎರಡನೇ ಬಾರಿ: ಸಿಎಂ ಯಡಿಯೂರಪ್ಪ ಅವರಿಗೆ ಕಳೆದ ವರ್ಷವೂ ಕೋವಿಡ್ ಪಾಸಿಟಿವ್ ಆಗಿತ್ತು. ಆಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದೆ.
ಸಿಎಂ ಯಡಿಯೂರಪ್ಪ ಮಾರ್ಚ್ 12 ಕ್ಕೆ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿದ್ದರು. ಈ ವಾರ ಎರಡನೇ ಡೋಸ್ ಲಸಿಕೆ ಪಡೆಯಬೇಕಿತ್ತು.