Advertisement
ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಲು ಆದ್ಯತೆ ನೀಡಿ.1 ಲಕ್ಷ ಟೆಸ್ಟ್ ಕಿಟ್ ಖರೀದಿಸಲಾಗಿದೆ. ಈಗಾಗಲೇ ಜಿಲ್ಲೆಗಳಿಗೆ ವಿತರಿಸಲಾಗಿದ್ದು, ತುರ್ತು ಪ್ರಕರಣಗಳಲ್ಲಿ ವಿವೇಚನೆಯಿಂದ ಈ ಪರೀಕ್ಷೆ ನಡೆಸಲು ಸೂಚಿಸಲಾಯಿತು.
Related Articles
Advertisement
ಇದನ್ನೂ ಓದಿ: ಕೋವಿಡ್ ಕಂಟಕಕ್ಕೆ ಕರಾವಳಿ ಬಂದ್: ದ. ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಗೆ ನಿರ್ಧಾರ
ಬೆಂಗಳೂರಿನಲ್ಲಿ ಕೋವಿಡ್ ಮತ್ತು ನಾನ್ ಕೋವಿಡ್ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯುವಂತೆ ಸೂಚಿಸಲಾಯಿತು.
60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು. ಸೀಲ್ ಡೌನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಈ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು. ಜನರು ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು ಎಂದು ಸೂಚಿಸಲಾಯಿತು.
ಇದನ್ನೂ ಓದಿ: ಕೋವಿಡ್ 19; ಬೆಂಗಳೂರು, ದ.ಕ ಮತ್ತೆ ಲಾಕ್ ಡೌನ್…ಯಾವ ವಸ್ತು ಸಿಗುತ್ತೆ, ಯಾವುದು ಇರಲ್ಲ?
ಅಂಬ್ಯುಲೆನ್ಸ್ ಮತ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಬಿಎಸ್ ವೈ ಸೂಚಿಸಿದರು. ಡಿಜಿಟಲ್ ಎಕ್ಸ್ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದ್ದು, ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡುವಂತೆ ಸೂಚಿಸಲಾಯಿತು.