ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಿಎಂ ಬಿಎಸ್ ವೈ ಅವರ ಈ ನಡೆ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲು ಸಿಎಂ ಬಿಎಸ್ ವೈ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆಗಿದ್ದರು.
ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದರೂ ಸಂಪೂರ್ಣ ಸಂಪುಟ ರಚನೆಯಾಗಿಲ್ಲ. ಆರು ಸ್ಥಾನಗಳು ಖಾಲಿಯಿದೆ. ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಈ ನಡುವೆ ಡಿಸಿಎಂ ಲಕ್ಷ್ಮಣ ಸವದಿ ದಿಲ್ಲಿ ಭೇಟಿ ನೀಡಿ ಬಂದಿರುವುದು ಹಲವು ಗುಮಾನಿಗಳಿಗೆ ಕಾರಣವಾಗಿದೆ.
ಇದನ್ನೂ ಓದಿ: 15 ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ನಳೀನ್ ಕುಮಾರ್ ಮಾತಿಗೆ ಡಿಕೆಶಿ ತಿರುಗೇಟು
ಆದರೆ ಭೇಟಿಯ ನಂತರ ಗೃಹ ಸಚಿವ ಬೊಮ್ಮಾಯಿ ಮಾತನಾಡಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಮಾದಕ ದ್ರವ್ಯ ಜಾಲದ ವಿರುದ್ಧದ ಸರ್ಕಾರದ ಕೆಲಸಕ್ಕೆ ರಾಜ್ಯಪಾಲರು ಮೆಚ್ಚುಗೆ ಸೂಚಿಸಿದ್ದಾರೆ ಎಂದಷ್ಟೇ ಹೇಳಿದರು.