ಮಂಗಳೂರು ; N-95 ಮಾಸ್ಕ್ ಇಲ್ಲದೆ ಹೇಗೆ ಆಡಳಿತ ನಡೆಸುತ್ತೀರಾ? ನಿಮಗೆ ಅಷ್ಟೂ ಕಾಮನ್ ಸೆನ್ಸ್ ಇಲ್ವಾ ? ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋವಿಡ್ 19 ಕುರಿತಂತೆ ನಗರದ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ವೇಳೆ ಮಾಸ್ಕ್ ಹಾಗೂ ಗ್ಲೌಸ್ ನ ಕೊರತೆಯಾಗಿರುವ ವಿಚಾರವನ್ನು ಪ್ರಸ್ತಾಪಿಸಿದ ವೇಳೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮಾಸ್ಕ್, ಗ್ಲೌಸ್ ಇಲ್ಲದೆ ನೀವು ಹೇಗೆ ಆಡಳಿತ ನಡೆಸುತ್ತೀರಾ, ನಿಮ್ಮಲ್ಲಿ ಎಸ್ ಡಿಆರ್ ಎಫ್ ಫಂಡ್ ಇದೆಯಲ್ಲ ಅದನ್ನು ಬಳಸಿ ಕೂಡಲೇ ಖರೀದಿಸಿ ಎಂದು ತಾಕೀತು ಮಾಡಿದರು.
ಅಗತ್ಯ ವಸ್ತುಗಳನ್ನು ದಾಸ್ತಾನು ಇಟ್ಟುಕೊಳ್ಳದೆ ನೌಕರರು ಕೆಲಸ ಮಾಡುವುದಾದರೂ ಹೇಗೆ, ನಿಮಗೆ ಎಲ್ಲಾ ಅಧಿಕಾರಗಳನ್ನು ಕೊಟ್ಟರೂ ಸಾಮಾನ್ಯ ಕೆಲಸ ಮಾಡಲು ನಿಮ್ಮಿಂದ ಆಗುವುದಿಲ್ಲ ಕೂಡಲೇ ಮಾಸ್ಕ್ ಖರೀದಿಸಿ ಎಂದು ತಾಕೀತು ಮಾಡಿದರು.
ಈ ವೇಳೆ ಜಿಲ್ಲಾ ಅರೋಗ್ಯ ಅಧಿಕಾರಿಯನ್ನು ಕೂಡಾ ತರಾಟೆಗೆ ತೆಗೆದುಕೊಂಡ ಸಿಎಂ ನೀನೇನು ನಿದ್ದೆ ಮಾಡ್ತಾ ಇದ್ದೀಯಾ? ಮಾಸ್ಕ್ ಕಡಿಮೆ ಇರುವ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ಯಾಕೆ ತರಲಿಲ್ಲ, ನಿಮಗೆ ಕೆಲಸ ಮಾಡುವ ಮನಸ್ಸು ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ :ಮೃತ ಫೈಟರ್ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ನಿರ್ಮಾಪಕರ ಪತ್ನಿ