Advertisement

Haveri: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಕನ್ನಡ ಮಾತೆಯ ಸೇವೆ ಮಾಡಲಿದೆ: ಸಿಎಂ ಬೊಮ್ಮಾಯಿ

04:34 PM Apr 19, 2023 | Team Udayavani |

ಹಾವೇರಿ: ಬಿಜೆಪಿ ಮೇ 13ರಂದು 125ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಮತ್ತೆ ಕನ್ನಡಮಾತೆಯ ಸೇವೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಶಿಗ್ಗಾವಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಕೆ ಹಿನ್ನಲೆ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿತ್ತು. ಮೂಲಸೌಕರ್ಯದ ಕೊರತೆ, ನೀರಿನ ಸಮಸ್ಯೆ ವ್ಯಾಪಕವಾಗಿತ್ತು ಎಂದು ಟೀಕಿಸಿದರು.

ಕ್ಷೇತ್ರದಲ್ಲಿ 2 ಏತ ನೀರಾವರಿ ಯೋಜನೆ ಅನುಷ್ಠಾನದ ಮೂಲಕ 100ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲಾಗಿದೆ. ಗ್ರಾಮೀಣ, ಜಿಲ್ಲಾ ರಸ್ತೆ, ರಾಜ್ಯ, ರಾಷ್ಟ್ರೀಯ ಹೆದ್ದಾರಿ ಸೇರಿ 2 ಸಾವಿರ ಕಿಮೀ ರಸ್ತೆಗಳ ನಿರ್ಮಾಣವಾಗಿದೆ ಎಂದು ಹೇಳಿದರು.

ಬಡತನ ಶಾಪವಲ್ಲ, ಸಾಯುವವರೆಗೆ ಬಡತನ ಇರಬೇಕಿಲ್ಲ. ಪ್ರಾಮಾಣಿಕತೆಯಿಂದ ದುಡಿಯಲು ಅವಕಾಶ ಕೊಟ್ಟಿದ್ದೇವೆ. ಈ ಭಾಗದಲ್ಲಿ ಅತಿ ಹೆಚ್ಚು ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಶಹರಗಳ ಸಂಪೂರ್ಣ ಅಭಿವೃದ್ಧಿ, ಪ್ರತಿ ಮನೆಗೆ ನಳದಿಂದ ನೀರು ಕೊಡುತ್ತಿದ್ದೇವೆ. ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರವು ಜಲಜೀವನ್ ಮಿಷನ್ ಅಡಿಯಲ್ಲಿ ಎಲ್ಲ ಹಳ್ಳಿಗಳಿಗೂ ನೀರಿನ ಸೌಕರ್ಯ ಕೊಡುತ್ತಿದ್ದೇವೆ. ಹೀಗಾಗಿ ಅಭಿವೃದ್ಧಿಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.

ನನ್ನಲ್ಲಿ ಆತ್ಮಸ್ಥೈರ್ಯ ಇದೆ. ಪ್ರಾಮಾಣಿಕ ಸೇವೆಯ ಕುರಿತು ನಂಬಿಕೆ ಇದೆ. ಆಯುರ್ವೇದ ಆಸ್ಪತ್ರೆ, ವೆಟರಿನರಿ ಪಾಲಿಟೆಕ್ನಿಕ್, ಜವಳಿ ಪಾರ್ಕ್ ಟೈಲ್ ಸೇರಿ ಅನೇಕ ಅಭಿವೃದ್ಧಿ ಕಾರ್ಯ ಆಗಿದೆ. ಬಂಕಾಪುರವನ್ನು ಮುಂದಿನ ದಿನಗಳಲ್ಲಿ ತಾಲ್ಲೂಕಾಗಲಿದೆ ಎಂದು ತಿಳಿಸಿದರು. ನನ್ನ ಸಾವಾದರೆ ಶಿಗ್ಗಾವಿ ಮಣ್ಣಿನಲ್ಲೇ ಅಂತ್ಯಸಂಸ್ಕಾರ ಮಾಡಿ ಎಂದು ಮನವಿ ಮಾಡಿದರು.

Advertisement

ಚಿತ್ರನಟ ಕಿಚ್ಚ ಸುದೀಪ್ ಮಾತನಾಡಿ, ಜನಮನ ಗೆದ್ದ ಸಿಎಂ ಬೊಮ್ಮಾಯಿ ಮಾಮ. ಅವರಿಗೆ ಕೆಲಸ ಮಾಡಲು ಇನ್ನಷ್ಟು ಸಮಯ ಬೇಕಿದೆ. ಜನರಿಗೆ ಒಳಿತಿಗಾಗಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿ ಅವರ ಕೆಲಸಗಳನ್ನು ಮೆಚ್ಚುತ್ತೇನೆ. ನಿಮ್ಮ ನಂಬಿಕೆ ಇದ್ದರೆ ಕೆಲಸ ಚೆನ್ನಾಗಿ ಆಗುತ್ತದೆ. ಗೆದ್ದೇ ಗೆಲ್ಲುವೆ ಒಂದು ದಿನ ಗೆಲ್ಲಲೇ ಬೇಕು ಒಳ್ಳೆತನ ಹಾಡನ್ನು ಅವರು ಉದಾಹರಿಸಿದರು.

ಇದಕ್ಕೂ ಮೊದಲು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಶಿಗ್ಗಾವಿಯಲ್ಲಿ ಸಿಎಂ ಬಸರಾಜ ಬೊಮ್ಮಾಯಿಯೊಂದಿಗೆ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ವೇಳೆ ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಚಿತ್ರ ನಟ ಸುದೀಪ್, ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಇದ್ದರು.

ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ.. ಜೀವನದ ಕೊನೆ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ಕ್ಷೇತ್ರ ಬದಲಿಸುವ, ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ಮಾಲೀಕರು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಮ್‍ಕೆವಾಸ್ತೆ ಅಲ್ಲ ಕಾಮ್‍ಕೆವಾಸ್ತೆ ಸಿಎಂ..
ಇಂದು ಸುಂದರವಾಗಿ ಸುಸ್ವಾಗತ ನೀಡಿ ಪ್ರೀತಿ ತೋರಿದ್ದೀರಿ. ಬೊಮ್ಮಾಯಿ ಮಾಮ ಅವರು ಕಡಿಮೆ ಅವಧಿಯಲ್ಲಿ ತುಂಬ ಕೆಲಸ ಮಾಡಿದ್ದಾರೆ. ಇವರು ನಾಮ್‍ಕೆವಾಸ್ತೆ ಅಲ್ಲ ಕಾಮ್‍ಕೆವಾಸ್ತೆ ಸಿಎಂ ಅವರು ಎಂದು ನಾಯಕನಟ ಕಿಚ್ಚ ಸುದೀಪ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next