Advertisement

ಚಂದ್ರಶೇಖರ್ ಗುರೂಜಿ ಹತ್ಯೆ : ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ : ಬೊಮ್ಮಾಯಿ

07:21 PM Jul 05, 2022 | Team Udayavani |

ಬೆಂಗಳೂರು  : ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಹೀನ ಕೃತ್ಯವಾಗಿದ್ದು, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯನ್ನು ನೀಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾನತಾಡಿದರು.

ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಹೀನ ಕೃತ್ಯ ಹಾಗೂ ದುರದೃಷ್ಟಕರವಾಗಿದೆ. ಸಿಸಿಟಿವಿ ವಿಡಿಯೋದಲ್ಲಿ ಎಲ್ಲ ಸ್ಪಷ್ಟವಾಗಿದೆ. ನಗರ ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಸಿಸಿಟಿವಿ ವಿಡಿಯೋದಲ್ಲಿರುವ ಕೊಲೆಪಾತಕರನ್ನು ಬಂಧಿಸಲು ತಿಳಿಸಲಾಗಿದ್ದು, ಪ್ರಕ್ರಿಯೆ ನಡೆದಿದೆ. ಕೊಲೆ ನಡೆದಿರುವ ಕಾರಣ ತನಿಖೆಯಿಂದ ತಿಳಿದು ಬರಲಿದೆ.

ಬಹಿರಂಗವಾಗಿ ಇಂತಹ ಘಟನೆಗಳು ಅತ್ಯಂತ ಖಂಡನೀಯ ಎಂದರು.

ಇದನ್ನೂ ಓದಿ : ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್‌ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next