Advertisement

ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಚನ ಬಿಡುಗಡೆ ಮಾಡಿದ ಸಿಎಂ

08:13 PM Nov 08, 2021 | Team Udayavani |

ಬೆಂಗಳೂರು: ಕಲಬುರಗಿಯಲ್ಲಿ ನ.27 ರಂದು ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.

Advertisement

ಈ ಸಂದರ್ಭಧಲ್ಲಿ ಮಾತನಾಡಿದ ಅವರು, ಸಮ್ಮೇಳನದ ಯಶಸ್ವಿಗೆ ಸರ್ಕಾರ ಎಲ್ಲ ರೀತಿಯ ಬೆಂಬಲ ಸಹಕಾರ ನೀಡಲಿದೆ ಎಂದು ಹೇಳಿದರು.

ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ತಿಳಿಸಿದರು.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾತನಾಡಿ, 25 ವರ್ಷಗಳ ನಂತರ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿದೆ. ಹೀಗಾಗಿ ಸಮ್ಮೇಳನ ಮಾದರಿಯಂತೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಕೊಮುಲ್ ವಿಭಜನೆಗೆ ಸಂಪುಟದ ಅಸ್ತು: ಮನವೊಲಿಸಲು ಸಚಿವ ಡಾ.ಕೆ.ಸುಧಾಕರ್ ಯಶಸ್ವಿ

Advertisement

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು , ಕೆಕೆಆರ್‌ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಬಂಗ್ಲೆ, ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ್‌ ಹಾಗೂ ದೇವಿಂದ್ರಪ್ಪ ಆವಂಟಿ, ಬಾಬುರಾವ ಯಡ್ರಾಮಿ, ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ, ರಾಜು ದೇಶಮುಖ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next