Advertisement
ಕವಿಸಂನಲ್ಲಿ ರವಿವಾರ ಸಂಜೆ ಚನ್ನವೀರಗೌಡ ಅಣ್ಣಾ ಪಾಟೀಲ ಸಂಸ್ಮರಣಾ ದತ್ತಿ ಹಾಗೂ ಟ್ರಸ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
Related Articles
ಹಿರಿಯರನ್ನು ಸ್ಮರಿಸುವುದು ಸ್ಫೂರ್ತಿದಾಯಕವಾಗಿರುತ್ತದೆ. ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ ಅವರು ಧಾರವಾಡಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.ಲಿಂಗಾಯತ ಟೌನ್ ಹಾಲ್,ವೀರಶೈವ ಮಹಾಸಭೆ,ಕೆಸಿಸಿ ಬ್ಯಾಂಕ್ ಸ್ಥಾಪನೆ ,ಎನ್ ಹೆಚ್ 4 ನಿರ್ಮಾಣ ಸೇರಿದಂತೆ ಹಲವು ಮಹತ್ವದ ಚಾರಿತ್ರಿಕ ಕಾರ್ಯಗಳನ್ನು ಅವರು ನಿರ್ವಹಿಸಿದ್ದಾರೆ .ಇತಿಹಾಸವನ್ನು ತಿರುಚುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಇದು ಸರಿಯಲ್ಲ.ಸತ್ಯವನ್ನು ವಸ್ತುನಿಷ್ಠವಾಗಿ ದಾಖಲಿಸಬೇಕು ಎಂದರು.
Advertisement
ತ್ರಿವಳಿ ನಗರ ಅಭಿವೃದ್ಧಿಗೆ ಒತ್ತು :
ಹುಬ್ಬಳ್ಳಿ-ಧಾರವಾಡ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ನೀಡಲಿದೆ.ಚೆನ್ನೈ ಮುಂಬೈ ಕೈಗಾರಿಕಾ ಕಾರಿಡಾರಿನಲ್ಲಿ ಧಾರವಾಡ ಪ್ರಮುಖ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ.ಹುಬ್ಬಳ್ಳಿ ಧಾರವಾಡ ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕೆ 849 ಕೋಟಿ ರೂ. ನೀಡಲು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ನಾನು ಧಾರವಾಡದ ಮನೆ ಮಗ :
ಧಾರವಾಡದ ಮನೆ ಮಗನಾದ ನಾನು ತವರಿಗೆ ಹೂವು ತರುತ್ತೇನೆ ಹೊರತು ಹುಲ್ಲನ್ನಲ್ಲ ಎಂದು ಮಾರ್ಮಿಕವಾಗಿ ಹೇಳಿದ ಮುಖ್ಯಮಂತ್ರಿಯವರು.ಇಲ್ಲಿನ ಜನರ ಪ್ರೀತಿ,ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳುವೆ ಎಂದರು.
ಗ್ರಂಥ ಬಿಡುಗಡೆ ಮಾಡಿದ ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಸರಳವಾಗಿ ಎಲ್ಲರೊಂದಿಗೆ ಬೆರೆಯುವ ಮುಖ್ಯಮಂತ್ರಿಬಬಸವರಾಜ ಬೊಮ್ಮಾಯಿ ಅವರು ನಾಡಿಗೆ ಮಾದರಿಯಾಗುವ ನಡೆ ಅನುಸರಿಸುತ್ತಿದ್ದಾರೆ. ಅವರ ತೀರ್ಮಾನಗಳು ಜನಮಾನಸದಲ್ಲಿ ಉಳಿಯುವ ರೀತಿಯಲ್ಲಿವೆ .ಧಾರವಾಡ ಬೈಪಾಸ್‌ನಿಂದ ಗಬ್ಬೂರ ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಯವರು ಅನುಮೋದನೆ ನೀಡಿದ್ದಾರೆ ಎಂದರು.
ದತ್ತಿದಾನಿಗಳ ಪರವಾಗಿ ಮಹಾನಗರಪಾಲಿಕೆ ಮಾಜಿ ಸದಸ್ಯ ಸಿ.ಎಸ್.ಪಾಟೀಲ ಮಾತನಾಡಿ, ಬ್ರಿಟಿಷ್ ಸರ್ಕಾರದಲ್ಲಿ ಇಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ ಅವರ ಸಾಧನೆ ಹಿರಿಯದಾಗಿದ್ದರೂ ಇನ್ನೂ ಸಾಕಷ್ಟು ಬೆಳಕಿಗೆ ಬರಬೇಕಾಗಿದೆ ಎಂದರು.
ಇದನ್ನೂ ಓದಿ : ಚೆನ್ನೈ ಮಳೆಯಲ್ಲಿ ಹೀರೋ ಆದ ಬ್ಯಾಂಕ್ ಮ್ಯಾನೇಜರ್ !
ಗ್ರಂಥ ಪರಿಚಯಿಸಿದ ಶಶಿಧರ ತೋಡಕರ್ ಅವರು, ಧಾರವಾಡದ ಚಾರಿತ್ರಿಕ ವ್ಯಕ್ತಿ ಚನ್ನವೀರಗೌಡ ಅಣ್ಣಾ ಪಾಟೀಲರು ಸರ್ಕಾರಿ ಇಂಜಿನಿಯರ್ ವೃತ್ತಿಯ ಜೊತೆಗೆ ಸಮಾಜಕ್ಕಾಗಿ ಮಹತ್ವದ ಕಾರ್ಯಗಳನ್ನು ಮಾಡಿದ್ದಾರೆ.ಪಿಬಿ ರಸ್ತೆ ನಿರ್ಮಾಣ,ಕೆಸಿಸಿ ಬ್ಯಾಂಕ್,ಎಲ್ ಇ ಎ ಸ್ಥಾಪನೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.ಕೃಷಿ ವಿವಿ ಸ್ಥಾಪನೆಗೆ ಜಮೀನು ನೀಡಿದ ಕೊಡುಗೆಯೂ ಅಮೂಲ್ಯ ಎಂದರು.
ದೇವರಹುಬ್ಬಳ್ಳಿ ಸಿದ್ಧಾರೂಢಮಠದ ಶಿವಸಿದ್ಧಶಿವಯೋಗಿಗಳು ಸಾನಿಧ್ಯ ವಹಿಸಿದ್ದರು. ಕವಿವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಮಾಜಿ ಸಚಿವ ಶಶಿಕಾಂತ ನಾಯ್ಕ,ಮಾಜಿ ಶಾಸಕ ಎ.ಬಿ.ದೇಸಾಯಿ,ಗ್ರಂಥಕರ್ತೃ ಮಲ್ಲಿಕಾರ್ಜುನ ಪಾಟೀಲ, ಶಶಿಧರ ತೋಡಕರ್,ರೇಖಾ ಶೆಟ್ಟರ್,ಬಿ.ವೈ.ಬಂಡಿವಡ್ಡರ, ಚಂದ್ರಗೌಡ ಎಸ್.ಪಾಟೀಲ ,ಡಾ.ಅರವಿಂದ ಯಾಳಗಿ,ರಾಜು ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಸ್ವಾಗತಿಸಿದರು, ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧ್ಯಕ್ಷ ಶಿವಾನಂದ ಭಾವಿಕಟ್ಟಿ ಆಶಯ ನುಡಿಗಳನ್ನಾಡಿದರು.ಸಹ ಕಾರ್ಯದರ್ಶಿ ಶಂಕರ ಕುಂಬಿ ಕಾರ್ಯಕ್ರಮ ನಿರೂಪಿಸಿದರು.