Advertisement

ಆಡಳಿತದಲ್ಲಿ ಪಾರದರ್ಶಕತೆ, ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಿಎಂ ದಿಟ್ಟ ಹೆಜ್ಜೆ

04:04 PM May 08, 2022 | Team Udayavani |

ಬೆಂಗಳೂರು : ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀಮತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರುಗಳು ಪಾರದರ್ಶಕ, ನ್ಯಾಯ ಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ.

ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚ ದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.

ಇದನ್ನೂ ಓದಿ : ಆಜಾನ್ : ಸುಪ್ರೀಂ ಕೋರ್ಟ್ ಅದೇಶ ಪಾಲನೆಗೆ ಸರ್ಕಾರ ಕ್ರಮ‌ಕೈಗೊಳ್ಳಲಿ‌ : ಯತ್ನಾಳ

Advertisement
Advertisement

Udayavani is now on Telegram. Click here to join our channel and stay updated with the latest news.

Next