Advertisement
ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
Related Articles
Advertisement
ಸೆಕಂಡರಿ ಮತ್ತು ಟರ್ಷಿಯರಿ ಕಾಲುವೆಗಳನ್ನು ನಿರ್ಮಾಣಕ್ಕೆ ಕ್ರಮ:ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಕೆರೆ ಪ್ರದೇಶಗಳನ್ನು ಒತ್ತುವರಿ ಮಾಡಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಇಂತಹ ಪ್ರದೇಶಗಳಲ್ಲಿ ಬಿಬಿಎಂಪಿ ವತಿಯಿಂದ ಸೆಕಂಡರಿ ಮತ್ತು ಟರ್ಷಿಯರಿ ಕಾಲುವೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಒಂದು ವರ್ಷದೊಳಗೆ ಮಾಡಲಾಗುವುದು ಎಂದರು. ರಾಜಕಾಲುವೆಯ ಉಳಿದ ಕಾಮಗಾರಿ ಈ ವರ್ಷ ಪೂರ್ಣ:
ರಾಜಕಾಲುವೆ ನಿರ್ಮಾಣ ಕಾರ್ಯ ಅಪೂರ್ಣವಾಗಿ ನಿಂತುಹೋಗಿರುವ ಪ್ರದೇಶಗಳಲ್ಲಿಯೇ ನೀರು ನುಗ್ಗುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜಕಾಲುವೆ ಸುಮಾರು 800 ಕಿಮೀ ಉದ್ದವಿದ್ದು, ಕಳೆದ ವರ್ಷ 400 ಕಿ.ಮೀ ಕಾಮಗಾರಿ ಮಾತ್ರ ಆಗಿದ್ದು, ಇನ್ನುಳಿದ ಕಾಮಗಾರಿಗಳನ್ನು ಈ ವರ್ಷ ಕೈಗೊಂಡು ಪೂರ್ಣಗೊಳಿಸಲಾಗುವುದು ಎಂದರು. ಉಲ್ಲಾಳದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ :
ಉಲ್ಲಾಳದಲ್ಲಿ ಜಲಮಂಡಳಿಯ ಕಾಮಗಾರಿ ನಡೆಯುತ್ತಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು. ರಾಜಕಾಲುವೆ, ಕೆರೆ ಒತ್ತುವರಿ ಪ್ರದೇಶವನ್ನು ಗುರುತಿಸಲಾಗಿದ್ದು,ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಒಳಚರಂಡಿ, ಗ್ಯಾಸ್ ಲೈನ್, ನೀರು ಸರಬರಾಜು, ಟೆಲಿಕಾಂ ಕೇಬಲ್, ವಿದ್ಯುಚ್ಛಕ್ತಿ ಕೇಬಲಿಂಗ್ , ಹಲವಾರು ಕಾಮಗಾರಿಗಳು ಒಟ್ಟಿಗೆ ಪ್ರಾರಂಭವಾಗಿದೆ. ಆದ್ದರಿಂದ ಟಾಸ್ಕ್ ಫೋರ್ಸ್‍ನ್ನು ರಚಿಸಲಾಗಿದ್ದು, ಈ ಎಲ್ಲ ಕಾಮಗಾರಿಗಳು ಮುಗಿದ ನಂತರ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.