Advertisement
ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶೀಘ್ರಗತಿ ಯಲ್ಲಿ ಮಂಜೂರಾತಿ ಪಡೆಯಲು ಅವರು ಸೋಮವಾರ ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಗೋವಾ ಮತ್ತು ಕೇರಳ ಮಾದರಿಯಲ್ಲೇ ರಾಜ್ಯದಲ್ಲೂ ಸಿಆರ್‌ಝಡ್‌ನಿಂದ ವಿನಾಯಿತಿ ಸಿಗಲಿದೆ. ಸಮುದ್ರ ತೀರದಿಂದ 10 ಮೀ., ನದಿ ತೀರದಿಂದ 50 ಮೀ. ಗೆ ಸಿಆರ್‌ಝಡ್ ಇಳಿಕೆಗೆ ಕರಾವಳಿ ನಿರ್ವಹಣ ಯೋಜನೆಯಡಿ ಅನುಮತಿ ಕೇಳಲಾಗಿತ್ತು. ಅನುಮತಿ ಸಿಕ್ಕಿರುವುದರಿಂದ ಕರಾವಳಿ ಪ್ರದೇಶದ ಅಭಿವೃದ್ಧಿಯೊಂದಿಗೆ ಆರ್ಥಿಕತೆ, ಪ್ರವಾಸೋದ್ಯಮ, ಮೀನುಗಾರಿಕೆ ಸಹಿತ ವಿವಿಧ ಚಟುವಟಿಕೆಗಳಿಗೆ ಇಂಬು ದೊರಕಲಿದೆ ಎಂದು ತಿಳಿಸಿದರು.
ಬೈಂದೂರು, ಮಲ್ಪೆ ಮತ್ತು ಮಂಗಳೂರು ಮರೀನಾಗಳಲ್ಲಿ ಪ್ರವಾ ಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅನುದಾನ ನೀಡಲಾಗು ವುದು. ಪಿಪಿಪಿ ಮಾದರಿ ಕೈಗೊಳ್ಳಲು ಸೂಚಿಸಿದ್ದು, 8-10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು. ಕಾಳಿ ವಾಟರ್ ವೇ ಡಿಪಿಆರ್ ಕಳುಹಿಸಿದ ಕೂಡಲೇ ಮಂಜೂರಾತಿ ಆಗಲಿದೆ. ಅಂಗರಘಟ್ಟದಿಂದ ಮಣಿಪಾಲ ವಾಟರ್ ವೇ ಯೋಜನೆಯ ಸಮೀಕ್ಷೆ ಮತ್ತು ಡಿಪಿಆರ್ ಸಿದ್ಧವಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಪ್ರಸ್ತಾವನೆಗೆ ಮಂಜೂರಾತಿ ನೀಡುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಗ್ಗೆ ತಜ್ಞರಿದ್ದರೆ ಅವರೊಂದಿಗೆ ಸಮಾಲೋಚಿಸುವುದಾಗಿ ತಿಳಿಸಿದರು.
Related Articles
ಸಾಗರಮಾಲಾ ಯೋಜನೆಯಡಿ 10 ಯೋಜನೆಗಳಿಗೆ ಈಗಾಗಲೇ ಮಂಜೂರಾತಿ ನೀಡಲಾಗಿದೆ. ಇನ್ನು 10 ಯೋಜನೆಗಳಿಗೆ ಸ್ಪಷ್ಟೀಕರಣ ಕೇಳಲಾಗಿದ್ದು, ನೀಡಲಾಗಿದೆ. ಕೆಲವು ಪ್ರಸ್ತಾವನೆಗಳನ್ನು ಪರಿಷ್ಕರಿಸಿ ಕೊಡಲು ಸೂಚಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ 250 ಕೋಟಿ ರೂ.ಗಳ ಮಜಾಲಿ ಮೀನುಗಾರಿಕೆ ಬಂದರು, ಮೇರಿಟೈಮ್ ಮೀನುಗಾರಿಕೆ ತರಬೇತಿ ಸಂಸ್ಥೆಯ ಉದ್ದೇಶ ಮತ್ತು ಹೆಸರು ಬದಲಾಯಿಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.
Advertisement