Advertisement

ಡಿ. 25ರಂದು ಜಾಂಬೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

11:58 PM Dec 22, 2022 | Team Udayavani |

ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ. 25ರಂದು ಮೂಡುಬಿದಿರೆಗೆ ಭೇಟಿ ನೀಡಲಿದ್ದಾರೆ. ಸಂಜೆ 4ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 5ಕ್ಕೆ ಆಳ್ವಾಸ್‌ ಸಂಸ್ಥೆಯಲ್ಲಿ ನಡೆಯುತ್ತಿರುವ ಜಾಂಬೂರಿಯಲ್ಲಿ ಏಕ್‌ ಭಾರತ್‌ ಶ್ರೇಷ್ಠ ಭಾರತ್‌, ನಮ್ಮ ಸಂಸ್ಕೃತಿ-ಸ್ವತ್ಛ ಸಂಸ್ಕೃತಿ, ಸಂಸ್ಕೃತಿಯಿಂದ ಯುವಜನರ ಒಗ್ಗಟ್ಟು ಕಾರ್ಯಕ್ರಮಗಳ ಅನಾವರಣ ಮಾಡಲಿದ್ದಾರೆ.

Advertisement

ರಾತ್ರಿ 7ಕ್ಕೆ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ 7.50ರ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next