Advertisement
ಹಿಂದುಳಿದ ಸಮುದಾಯಗಳ ಪೈಕಿ ಒಂದಾದ ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸಂಖ್ಯಾ ಬಾಹುಳ್ಯವನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯ ಎಂದು ಮನವಿ ಮಾಡಲಾಗಿದೆ. ಬಿಲ್ಲವ, ಈಡಿಗ, ನಾಮಧಾರಿ ಎಂಬಿತ್ಯಾದಿ ಉಪನಾಮಗಳನ್ನು ಹೊಂದಿರುವ ಸಮಾಜದ ಎಲ್ಲ ವರ್ಗವನ್ನು ಒಂದೇ ವೇದಿಕೆಯ ಅಡಿಗೆ ತಂದು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕೆಂದು ಸಮಾಜದ ನಿಯೋಗ ಮನವಿ ಮಾಡಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಿಗಮ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
Related Articles
Advertisement