Advertisement

ಅವಸರದಿಂದ ದೇವಸ್ಥಾನ ಒಡೆಯಬೇಡಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

08:46 PM Sep 14, 2021 | Team Udayavani |

ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ.  ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.

ಇಡೀ ಕರ್ನಾಟಕದಲ್ಲಿ ಅವಸರದ ತೀರ್ಮಾನ ತೆಗೆದುಕೊಂಡು ದೇವಸ್ಥಾನಗಳನ್ನು ಒಡೆಯುವ ಕೆಲಸ ಮಾಡಬಾರದು. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಿ ಎರಡು ದಿನಗಳಲ್ಲಿ ನಿರ್ದಿಷ್ಟ ಸೂಚನೆ ನೀಡಲಾಗುವುದು. ಸದನ ನಡೆಯುತ್ತಿರುವುದರಿಂದ ಎಲ್ಲ ವಿವರಗಳನ್ನು ಸದನಕ್ಕೆ ಒದಗಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next