Advertisement
ಮಂಗಳವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಮಂಡನೆ ವೇಳೆ ಮಾತನಾಡಿದ ಅವರು, “ರಾಜಕೀಯ ಲಾಭಕ್ಕಾಗಿ ನೀವು (ಕಾಂಗ್ರೆಸ್) ಅಧಿವೇಶನದಲ್ಲಿ ಈ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೀರಿ. ವಾಸ್ತವವಾಗಿ ಸಚಿವರು ಹೇಳಿದೆ ಇರುವುದನ್ನು, ಸೇರಿಸಿ ಹೋರಾಟ ನಡೆಸುತ್ತಿದ್ದೀರಿ. ಇದು ತಪ್ಪು ಮತ್ತು ಜನ ಕೂಡ ಇದನ್ನು ಒಪ್ಪುವುದಿಲ್ಲ. ಬೇಕಿದ್ದರೆ ಇದೇ ವಿಷಯ ಇಟ್ಟುಕೊಂಡು ಜನರ ಮುಂದೆ ಬನ್ನಿ. ಆಗ ಜನರೇ ತೀರ್ಪು ಹೇಳುತ್ತಾರೆ’ ಎಂದು ಸವಾಲು ಹಾಕಿದರು.
Related Articles
Advertisement
ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬರುವ ದಿನಗಳಲ್ಲಿ 8, 9 ಮತ್ತು 10ನೇ ತರಗತಿಯ ಗ್ರಾಮೀಣ ಹೆಣ್ಣುಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಇರುವ ವಿದ್ಯಾನಿಧಿ ಯೋಜನೆ ಅಡಿ ಇದುವರೆಗೆ 4.52 ಲಕ್ಷ ಮಕ್ಕಳಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಹೇಳಿದರು.
ಆರು ತಿಂಗಳಲ್ಲಿ 11.2 ಲಕ್ಷ ಮನೆಗಳಿಗೆ ಮನೆ ಮನೆ ಗಂಗೆ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 1,400 ಕೋಟಿ ರೂ. ಒಂದೇ ವರ್ಷದಲ್ಲಿ ಬಿಡುಗಡೆ ಮಾಡಲಾಗಿದೆ. ಬರುವ ವರ್ಷ ಈ ಅನುದಾನವನ್ನು ಮೂರು ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದ ಅವರು, ಕೋವಿಡ್ ಮತ್ತು ನೆರೆ ಹಾವಳಿ ನಡುವೆಯೂ ಸರ್ಕಾರ ಅಭಿವೃದ್ಧಿ ಪಥ ಮುಂದುವರಿಸಿದೆ ಎಂದು ಹೇಳಿದರು.