Advertisement

ಬೊಮ್ಮಾಯಿ ಸಂಪುಟ ರಚನೆ : ಪೂರ್ಣಿಮಾ ಅಸಮಾಧಾನ

04:54 PM Aug 04, 2021 | Team Udayavani |

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ರಚನೆಯಾದ ಬೆನ್ನಿಗೆ ಈಗ ಅಸಮಾಧಾನದ ಧ್ವನಿ ಹೆಚ್ಚಾಗಿದೆ.

Advertisement

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ದಿನ ಸಂಭಾವ್ಯ ಸಚಿವರ ಪಟ್ಟಿಯಲ್ಲಿದ್ದ ಹಿರಿಯೂರು ಶಾಸಕಿ ಪೂರ್ಣಿಮಾ ಕೃಷ್ಣಪ್ಪ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಸಮಧಾನವನ್ನು ವ್ಯಕ್ತಪಡಿಸಿಕೊಂಡಿದ್ದಾರೆ.

ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು  ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇದ್ದಾಗಲೂ ನಾನು ಪಕ್ಷನಿಷ್ಠೆ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಹಾಗೂ ಎಂಎಲ್ಸಿ ಎಲ್ಲೂ ಕೂಡ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ  ತಂದಿದ್ದೆ ಎಂದಿದ್ದಾರೆ.

ಇದನ್ನೂ ಓದಿ : ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯ ವಾಗಿದ್ದವು ಪಕ್ಷವು ಅದನ್ನೆಲ್ಲ ಮರೆತಿದೆ. ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ ಎಂದು ಅವರು ತಮ್ಮಅಸಮಾಧಾನವನ್ನು ತೋಡಿಕೊಂಡಿದ್ದಾರೆ.

Advertisement

ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ, ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ ಒಂದೇ ಮನೇಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ. ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿ ಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್ರವರು, ಚಂದ್ರಪ್ಪರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ  ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು.

ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯವು 80ರಷ್ಟು ಭಾಗವು ಬಿಜೆಪಿಗೆ ಮತ ನೀಡಿಡೆ ಪಕ್ಷ ಮರೆಯಬಾರದು ಇತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು,ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ ಎಂದಿದ್ದಾರೆ.

ಇನ್ನು,  ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಎಲ್ಲಾ ಸಚಿವರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಮಹಿಳೆ ಮೇಲೆ ಗಂಡ ಸೇರಿದಂತೆ ಐವರಿಂದ ಹಲ್ಲೆ: ಸಿ ಎಸ್ ಪುರ ಪೋಲಿಸರಿಂದ  5 ಜನರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next